News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಪೊಲೀಸರ ಕಾರ್ಯ ಶ್ಲಾಘನೀಯ ಎಂದ ವಿಶ್ವ ಹಿಂದೂ ಪರಿಷತ್ ನ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ

Vishwa Hindu Parishad (VHP) working president Suresh Muthappa said that the work done by the police is commendable.
Photo Credit : By Author

ಮಡಿಕೇರಿ:  ಕೊಡಗಿನ ಕುಲದೇವಿ ಕಾವೇರಿ ಹಾಗೂ ಕೊಡವ ಮಹಿಳೆಯರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಬಂಧಿಸಿದ ಕೊಡಗು ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯವೆಂದು ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಸಂಘಟನೆಗಳ ಮನವಿಗೆ ತಕ್ಷಣ ಸ್ಪಂದಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆದ್ದರಿಂದ ವಿರಾಜಪೇಟೆಯಲ್ಲಿ ಜು.18 ರಂದು ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಕೈಬಿಟ್ಟಿರುವುದಾಗಿ ಹೇಳಿದ್ದಾರೆ.

ಯಾರೇ ಆಗಿರಲಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಬಂಧಿಸಲ್ಪಟ್ಟಿರುವ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸುರೇಶ್ ಮುತ್ತಪ್ಪ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು