ಮಡಿಕೇರಿ: ಅಮ್ಮತ್ತಿ ಕಾನಂಗಾಲ ಗ್ರಾಮದ ಅಯ್ಯಪ್ಪ ಅವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಜಾನಕಿ (44) ಎಂಬ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದೆ.
ಈ ಹಿನ್ನೆಲೆ ಮಹಿಳೆ ಕಾಲಿಗೆ ಗಂಭೀರ ಗಾಯವಾಗಿದ್ದು, ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಗೆ ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಗಾಯಾಳುವಿನ ಆರೋಗ್ಯ ವಿಚಾರಣೆ ಮಾಡಿದ್ದಾರೆ.