News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಆರೋಗ್ಯಯುತ ಬದುಕಿಗೆ ಯೋಗ ಮತ್ತು ವ್ಯಾಯಾಮ ಸಹಕಾರಿ- ಅಪ್ಪಚ್ಚು ರಂಜನ್

Madikeri: Yoga and exercise help in a healthy life: Appachu Ranjan
Photo Credit : By Author

ಮಡಿಕೇರಿ, ಜ.15: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ, ಜಿಲ್ಲಾ ಆಯೂಷ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯೋಗ ಒಕ್ಕೂಟ ಸಹಕಾರದಲ್ಲಿ ನಗರದ ಸಾಯಿ ಹಾಕಿ ಟರ್ಫ್ ನಲ್ಲಿ ಭಾನುವಾರ ಯೋಗಥಾನ್ ಕಾರ್ಯಕ್ರಮ ನಡೆಯಿತು.

ಮಡಿಕೇರಿಯ ಹಾಕಿ ಟರ್ಫ್ ನಲ್ಲಿ ನಡೆದ ಯೋಗಥಾನ್ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ವು ರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ತಹಶಿಲ್ದಾರಾದ ಪಿ.ಎಸ್.ಮಹೇಶ್, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಅಧ್ಯಕ್ಚರಾದ ಪೊನ್ನಚ್ಚನ ಶ್ರೀನಿವಾಸ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾದೇವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಇತರರು ಯೋಗಾಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಸಕರಾದ ಎಂ.ಪಿ.ಅಪ್ಪಚ್ವು‌ರಂಜನ್ ಅವರು ಯೋಗಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಆರೋಗ್ಯಯುತ ಬದುಕಿಗೆ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟರು. ಯೋಗಥಾನ್ ಕಾರ್ಯಕ್ರಮವನ್ನು ೧೫ ದಿನಗಳಿಗೊಮ್ಮೆ ನಡೆಸುವಂತಾಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಯೋಗ ಪ್ರದರ್ಶನಕ್ಕಿಂತಲೂ ನಮ್ಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಅತ್ಯವಶ್ಯಕ. ಒಳ್ಳೆಯ ಜೀವನಕ್ಕೆ ಪ್ರತಿನಿತ್ಯ ಯೋಗ ಮಾಡುವಂತಾಗಬೇಕು ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ಮಾತನಾಡಿ ಮಡಿಕೇರಿ, ಪೊನ್ನಂಪೇಟೆ ಮತ್ತು ಕೂಡಿಗೆಯ ಹಾಕಿ ಟರ್ಫ್ ನಲ್ಲಿ ಯೋಗಥಾನ್ ಆಯೋಜಿಸಲಾಗಿದ್ದು, ಸುಮಾರು ೨ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದರು.

ಯೋಗಶಿಕ್ಷಕರಾದ ಮಹೇಶ್ ಕುಮಾರ್ ಅವರು ಯೋಗಥಾನ್ ಕಾರ್ಯಕ್ರಮ ನಡೆಸಿಕೊಟ್ಟರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸದಾಶಿವ ಪಲ್ಲೇದ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು