Categories: ಮಡಿಕೇರಿ

ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಂಪರ್ಕದಲ್ಲಿದ್ದಾರೆ: ಸಚಿವ ಭೋಸರಾಜು

ಮಡಿಕೇರಿ: ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಬಿಜೆಪಿ ಪಕ್ಷ ನಾವಿಕನಿಲ್ಲದ ದೋಣಿಯಂತಾಗಿದೆ. ಒಬ್ಬೊಬ್ಬರೇ ಪಕ್ಷ ತ್ಯಜಿಸುತ್ತಿದ್ದಾರೆ. ಅದೇ ರೀತಿ ಬಿಜೆಪಿ ನಾಯಕ ರೇಣುಕಾಚಾರ್ಯ ಕೂಡ ಪಕ್ಷದ ಹೈಕಮಾಂಡ್‌ ವಿರುದ್ಧ ಆಗಾಗ್ಗೆ ಹೇಳಿಕೆ ನೀಡುತ್ತಿದ್ದಾರೆ.

ಇದೀಗ ಸಚಿವ ಭೋಸರಾಜು ಹೇಳಿಕೆಯೊಂದನ್ನು ನೀಡಿದ್ದು, ರೇಣುಕಾಚಾರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ನನ್ನನ್ನು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಈಗಾಗಲೇ ರೇಣುಕಾಚಾರ್ಯ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಎಷ್ಟು ಮಂದಿ ನಾಯಕರು ಮಾತನಾಡಿದ್ದಾರೆ ಎಂದು ಈಗಲೇ ಹೇಳುವುದಿಲ್ಲ ಎಂದು ಇಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಬಿಜೆಪಿ ಖಾಲಿ ಕುಳಿತಿರುವುದರಿಂದ ಆದಾಯ ತೆರಿಗೆ ದಾಳಿ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಆವರಿಸಿದೆ. ಅದರ ಬಗ್ಗೆ ಮಾತನಾಡದೇ ಸುಮ್ಮನೇ ಆರೋಪಿಸುತ್ತಿದ್ದಾರೆ. ಅವರು ನಮ್ಮ ಬಗ್ಗೆ ಏನು ಆರೋಪ ಮಾಡಿದ್ದಾರೆಯೋ ಅದನ್ನು ಅವರ ಇದುವರೆಗೂ ಮಾಡಿಕೊಂಡು ಬಂದಿದ್ದು ಎಂದು ತಿಳಿಸಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago