Categories: ಮಡಿಕೇರಿ

ಮಡಿಕೇರಿ: ಕೊಡಗಿನಲ್ಲಿ ಚೇತರಿಕೆ ಕಂಡ ಮುಂಗಾರು ಮಳೆ

ಮಡಿಕೇರಿ: ಕೊಡಗಿನಲ್ಲಿ ನಿಧಾನಗತಿಯಲ್ಲಿ ಮುಂಗಾರು ಚೇತರಿಕೆ ಕಾಣಿಸುತ್ತಿದೆ. ಆದರೆ ಮಳೆ ಪ್ರಮಾಣ ತೀರ ಕಡಿಮೆಯಾಗಿರುವುದು ಆತಂಕ ಹುಟ್ಟಿಸಿದೆ. ಈಗ ಆರಂಭವಾಗಿರುವ ಮಳೆ ಮುಂದಿನ ದಿನಗಳಲ್ಲಿ ಬಿರುಸುಪಡೆದುಕೊಂಡರೆ ಜನ ನೆಮ್ಮದಿಯುಸಿರು ಬಿಡಬಹುದು ಇಲ್ಲದೆ ಹೋದರೆ ಸಂಕಷ್ಟ ತಪ್ಪಿದಲ್ಲ.

ಮುಂಗಾರು ಇಷ್ಟರಲ್ಲೇ ಬಿರುಸಾಗಿ ಜಿಲ್ಲೆಯಲ್ಲಿರುವ ಕಾವೇರಿ, ಲಕ್ಷ್ಮಣ ತೀರ್ಥ ಸೇರಿದಂತೆ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಬೇಕಾಗಿತ್ತು. ಆದರೆ ಈ ವರ್ಷ ಅದ್ಯಾವುದೂ ಆಗಲೇ ಇಲ್ಲ. ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆ ಕಾಣಲೇ ಇಲ್ಲ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ತನಕ ಜಿಲ್ಲೆಯ ಜನ ಮಳೆಯಿಂದ ಉಂಟಾಗುವ ಪ್ರವಾಹ, ಭೂಕುಸಿತಕ್ಕೆ ಭಯಪಡುತ್ತಿದ್ದರು. ಆದರೆ ಈ ಬಾರಿ ಮಳೆ ಬಂದಿಲ್ಲವಲ್ಲ ಎಂದು ಭಯಪಡುವಂತಾಗಿದೆ.

ಇಷ್ಟಕ್ಕೂ ಕೊಡಗಿನಲ್ಲಿ ಮಳೆಯ ಪರಿಸ್ಥಿತಿ ಹೇಗಿದೆ ? ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಹೇಗಿದೆ ? ಎಂಬುದನ್ನು ನೋಡಿದ್ದೇ ಆದರೆ ಅಚ್ಚರಿ ಮೂಡುತ್ತದೆ. ಸದ್ಯ ಮುಂಗಾರು ಚೇತರಿಕೆಯಾಗುತ್ತಿರುವಂತೆ ಕಾಣಿಸುತ್ತಿದೆ. ಇದು ಜನರಲ್ಲಿ ಆಶಾಭಾವನೆ ಮೂಡಿಸುತ್ತಿದೆ. ಹಾಗಾದರೆ ಕೊಡಗಿನಲ್ಲಿ ಜಿಲ್ಲಾವಾರು, ತಾಲೂಕು, ಹೋಬಳಿವಾರು ಮಳೆಯ ಪ್ರಮಾಣ ಹೇಗಿದೆ ಎಂಬುದನ್ನು ನೋಡುತ್ತಾ ಹೋದರೆ ಕಳೆದ ವರ್ಷಕ್ಕಿಂತ ತೀರಾ ಕಡಿಮೆಯಾಗಿರುವುದು ಬೇಸರದ ಸಂಗತಿಯಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿನ ಮಳೆಯ ಪ್ರಮಾಣವನ್ನು ಗಮನಿಸಿದರೆ ಕಳೆದ ವರ್ಷಕ್ಕಿಂತ ತೀರಾ ಕಡಿಮೆಯಿರುವುದು ಗೋಚರಿಸಿದೆ. ಇದು ಆತಂಕಕಾರಿಯೂ ಹೌದು. ಮುಂದಿನ ದಿನಗಳಲ್ಲಿ ಮುಂಗಾರು ಚೇತರಿಕೆಯಾಗಲಿ ಎಂಬುದೇ ಎಲ್ಲರ ಪ್ರಾರ್ಥನೆಯಾಗಿದೆ.

Gayathri SG

Recent Posts

ಲೋಕಸಭಾ ಚುನಾವಣೆ : ಮತದಾರನಿಗೆ ಕಾಂಗ್ರೆಸ್​ ಶಾಸಕನಿಂದ ಕಪಾಳಮೋಕ್ಷ

ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ವೈಎಸ್​ಆರ್​ ಕಾಂಗ್ರೆಸ್​ನ ಶಾಸಕ ಎ ಶಿವಕುಮಾರ್ಮ ಮತಗಟ್ಟೆಯಲ್ಲಿ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ…

2 mins ago

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

14 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

16 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

36 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

52 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

1 hour ago