Categories: ಮಡಿಕೇರಿ

ನಾಪೋಕ್ಲು: ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿದ ಬಸವರಾಜ ಬೊಮ್ಮಾಯಿ

ನಾಪೋಕ್ಲು: ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟು ಕೊಡವ ಭಾಷೆಯಲ್ಲಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕುಟುಂಬಗಳಲ್ಲಿ ಸದಸ್ಯರ ಸಂಬಂಧ ಉತ್ತಮವಾಗಿರಬೇಕು – ಅದು ಭಾರತದ ಸಮಾಜಕ್ಕೆ ಉತ್ತಮ ಸಂಸ್ಕೃತಿ ಎಂದು ಹೇಳಿದರು.

ನಾಪೋಕ್ಲುವಿನಲ್ಲಿ ನಡೆಯುತ್ತಿರುವ ಅಪ್ಪಚೆಟ್ಟೋಳಂಡ 23 ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಶಿಸಿ ಹೋಗುತ್ತಿರುವ ಕೊಡವ ಕುಟುಂಬಗಳ ನಡುವಿನ ಸಂಬಂಧ ಮತ್ತೆ ಬೆಸೆಯಲು ಕೌಟುಂಬಿಕ ಹಾಕಿ ಉತ್ಸವ ಸಹಕಾರಿ ಎಂದರು.

ಭಾರತೀಯ ನಾಗರಿಕತೆ, ನಿಜವಾದ ಸಂಸ್ಕೖತಿಗೆ ಸೂಕ್ತ ಉದಾಹರಣೆ – ಕೊಡವ ಕೌಟುಂಬಿಕ ಹಾಕಿ ಇದಕ್ಕೆ ನಿದಶ೯ನ.
ಹಾಕಿ ಕ್ರೀಡೆಯ ಮೂಲಕ ಕೊಡವರು ತಮ್ಮಲ್ಲಿನ ಉತ್ತಮ ಕೌಟುಂಬಿಕ ಸಂಬಂಧಗಳಿಗೆ ಮಾದರಿಯಾಗಿದ್ದಾರೆ. ನಾವು ಏನು ಆಗಿದ್ದೇವೆ ಅದೇ ಸಂಸ್ಕೃತಿ ಅದನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದು ಆಗಬೇಕಾಗಿದೆ. ಆಚಾರ ವಿಚಾರ ಸಂಸ್ಕೃತಿಯನ್ನು ಜೋಡಿಸುವ ಈ ಕೌಟುಂಬಿಕ ಹಾಕಿ ಉತ್ಸವ ಯಶಸ್ವಿಯಾಗಲಿ ಹೀಗೆ ನಿತ್ಯ ನಿರಂತರ ಮುಂದುವರಿಯಲಿ ಎಂದರು.

ಕೆ.ಜಿ.ಬೋಪಯ್ಯ ಅವರು ಈ ಹಿಂದೆ ಕ್ರಿಕೆಟ್ ಕ್ರೀಡೆಗೆ ಅನುದಾನ ಕೋರಿ ಬಂದಿದ್ದರು ನಾನು ಇಲ್ಲ ಎಂದು ಹೇಳಿ ಕಳಿಸಿದೆ. ಆದರೆ ಹಾಕಿ ಹಬ್ಬಕ್ಕೆ ಅನುದಾನ ಕೇಳಲು ಬಂದಾಗ ಅವರ ನಿರೀಕ್ಷೆ 50 ಲಕ್ಷ ಇತ್ತು ಆದರೆ ನಾನು ಒಂದು ಕೋಟಿ ರೂಪಾಯಿಯನ್ನು ನೀಡಿದ್ದೇನೆ ಎಂದರು. ಕಾರಣ ಕೊಡಗಿನವರ ಕ್ರೀಡೆ ಹಾಕಿ ಎಂದು ನನಗೆ ತಿಳಿದಿದೆ. ಅದನ್ನು ಪ್ರೋತ್ಸಾಹಿಸೋದು ನಮ್ಮೆಲ್ಲರ ಕರ್ತವ್ಯ ಎಂದರು.

ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣಕ್ಕೆ ನನ್ನ ತಂದೆ ಎಸ್. ಆರ್ ಬೊಮ್ಮಾಯಿ ಸಚಿವರಾಗಿದ್ದಾಗ ಅನುದಾನ ನೀಡಿದ್ದರು.

ಕೊಡವ ಅಭಿವೃದ್ಧಿ ನಿಗಮ ಆಗಬೇಕೆಂಬ ನಿಮ್ಮ ಬೇಡಿಕೆ ಇದೆ. ಕೊಡವ ಅಭಿವೖದ್ದಿ ನಿಗಮ ಸ್ಥಾಪನೆಗೆ ನಾನು ಕೂಡಲೇ ಆದೇಶ ಹೊರಡಿಸುತ್ತೇನೆ ಎಂದು ಈ ಸಂದರ್ಭ ಘೋಷಿಸಿದರು.

ಕಾಯ೯ಕ್ರಮದಲ್ಲಿ ಸಹಕರ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುಜಾಕುಶಾಲಪ್ಪ, ಮನುಮುತ್ತಪ್ಪ, ಪದ್ಮಶ್ರೀ ಎಂ.ಪಿ.ಗಣೇಶ್, ಪದ್ಮಶ್ರೀ ರಾಣಿ ಮಾಚಯ್ಯ, ಎ.ಬಿ.ಸುಬ್ಬಯ್ಯ, ಪಾಂಡಂಡ ಬೋಪಣ್ಣ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಕೊಡವ ಕೌಟುಂಬಿಕ ಹಾಕಿ ಉತ್ಸವ ಏಪ್ರಿಲ್ 9 ರವರೆಗೆ ನಾಪೋಕ್ಲುವಿನಲ್ಲಿ ಜರುಗಲಿದೆ 336 ಕೊಡವ ಕುಟುಂಬ ತಂಡಗಳು ಪಾಲ್ಗೊಳ್ಳುತ್ತಿವೆ.

Ashika S

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

10 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

20 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

31 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

49 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

60 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

2 hours ago