Categories: ಮಡಿಕೇರಿ

ವಿಶ್ವ ಹಿಂದೂ ಪರಿಷತ್ ವತಿಯಿಂದ ತಲಕಾವೇರಿಯಲ್ಲಿ ಮಳೆಗಾಗಿ ಪ್ರಾರ್ಥನೆ

ಕೊಡಗು: ವಿಶ್ವ ಹಿಂದೂ ಪರಿಷತ್ ಕೊಡಗು ಮತ್ತು ಬೆಂಗಳೂರು ಮಹಾನಗರ, ಬನಶಂಕರಿ ಜಿಲ್ಲೆಯ ಕಾರ್ಯಕರ್ತರ ವತಿಯಿಂದ ಮಳೆ ಬಾರದೆ ರಾಜ್ಯದಾದ್ಯಂತ ಬರಗಾಲದ ಪರಿಸ್ಥಿತಿ ಎದುರಾಗಿರುವ ಕಾರಣ ಶ್ರೀ ಕ್ಷೇತ್ರಭಾಗಮಂಡಲದಲ್ಲಿ ವಿಶೇಷ ಪೂಜೆ ಮತ್ತು ಬೆಳ್ಳಿಯ ಹರಕೆಯನ್ನು ಸಮರ್ಪಿಸಲಾಯಿತು.

ಜೀವನದಿ ತಲಕಾವೇರಿಯ ಪವಿತ್ರ ತೀರ್ಥಕುಂಡಿಕೆಯಲ್ಲಿ ವಿಶೇಷ ಬಾಗಿನ ಸಮರ್ಪಣೆ ನಡೆಸಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವಂತೆ ತಾಯಿ ಕಾವೇರಿ ಕರುಣಿಸಿ ಹರಸಲಿ ಎಂದು ಪ್ರಾರ್ಥಿಸಲಾಯಿತು.

ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ಯ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮಾತನಾಡಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜನರು ಮಳೆಯಿಲ್ಲದೆ ನೀರಿಲ್ಲದೆ ಬರಗಾಲದ ಪರಿಸ್ಥಿತಿಯನ್ನು ಎದುರಿಸುವಂತಾಗಿದ್ದು,
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕಾವೇರಿನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಮಳೆಯು ಸಕಾಲದಲ್ಲಿ ಬರಲಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಭಜರಂಗದಳ ಪ್ರಾಂತ್ಯ ಸಂಯೋಜಕ ಪ್ರಪಂಚನ್, ವಿ.ಹಿಂ.ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಸಹಕಾರ್ಯದರ್ಶಿ ಕೇತೀರ ಯತೀಶ್, ಭಜರಂಗದಳ ಜಿಲ್ಲಾ ಸಂಯೋಜಕ ಪ್ರವೀಣ್ ಸಿದ್ಧಾಪುರ, ಸಹಸಂಯೋಜಕ ನವೀನ್ ಪೂಜಾರಿ, ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ರಿಶ್ತ ಚಂಗಪ್ಪ, ಮಾತೃಶಕ್ತಿ ಜಿಲ್ಲಾ ಸಂಯೋಜಕಿ ಉಮಾವತಿ, ಜಿಲ್ಲಾ ಸಹಸಂಯೋಜಕಿ ಪೂರ್ಣಿಮಾ ಸುರೇಶ್, ಕೋಶಾಧ್ಯಕ್ಷ ಸಂಪತ್ ಸರಳಾಯ, ವಿ.ಹಿಂದೂ.ಪರಿಷತ್ತಿನ ಪೊನ್ನಂಪೇಟೆ ಪ್ರಖಂಡ ಅಧ್ಯಕ್ಷ ಪಂದ್ಯಂಡ ಹರೀಶ್, ಕಾರ್ಯದರ್ಶಿ ಅಮ್ಮತ್ತೀರ ಸುರೇಶ್ ಮತ್ತು ಕಾರ್ಯಕರ್ತರು ಹಾಜರಿದ್ದರು.

Ashika S

Recent Posts

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

40 seconds ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

14 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

31 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

48 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

49 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

1 hour ago