Categories: ಮಡಿಕೇರಿ

ಅಂತರರಾಷ್ಟ್ರೀಯ ಸ್ಮಾರಕವನ್ನು ನಿರ್ಮಿಸುವಲ್ಲಿಯವರೆಗೆ ಶಾಂತಿಯುತ ಹೋರಾಟ: ಎನ್.ಯು.ನಾಚಪ್ಪ

ಮಡಿಕೇರಿ: ಟಿಪ್ಪು ಹಾಗೂ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಕುತಂತ್ರದಿಂದ 1785ರ ಡಿ.12 ರಂದು ಹತ್ಯೆಗೀಡಾದ ಕೊಡವ ಬುಡಕಟ್ಟು ವೀರರ ನೆನಪಿಗಾಗಿ ಅಂತರರಾಷ್ಟ್ರೀಯ ಸ್ಮಾರಕವನ್ನು ನಿರ್ಮಿಸುವಲ್ಲಿಯವರೆಗೆ ಶಾಂತಿಯುತ ಹೋರಾಟ ಮುಂದುವರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ.

ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ವತಿಯಿಂದ ನಡೆದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಹಿರಿಯರನ್ನು ಕಳೆದುಕೊಂಡ ನೋವು ಇಂದಿಗೂ ಮಾಸಿಲ್ಲ, ಈ ಘೋರ ಘಟನೆ ಕೊಡವ ಬುಡಕಟ್ಟು ಜನಾಂಗದ ಸಂಖ್ಯೆಯನ್ನು ಕ್ಷೀಣಿಸುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

32ಕ್ಕೂ ಹೆಚ್ಚು ಬಾರಿ ಟಿಪ್ಪು ಸೇರಿದಂತೆ ನಾಡಿನ ಶತ್ರುಗಳನ್ನು ಹಿಮ್ಮಟ್ಟಿಸಿದ ವೀರ ಕೊಡವರನ್ನು ಸಂಪೂರ್ಣವಾಗಿ ನಾಶ ಮಾಡಲು ಹೂಡಿದ ಸಂಚಿನಿಂದ ಹಿರಿಯರ ಹತ್ಯೆ ನಡೆದಿದೆ. ಈ ದುರಂತ ನರಮೇಧವನ್ನು ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಸಾವಿಗೀಡದವರ ಸ್ಮರಣೆಗಾಗಿ ಸ್ಮಾರಕವನ್ನು ನಿರ್ಮಿಸಬೇಕು. ಇದೇ ಸಂದರ್ಭ ಸಂಘಟನೆಯ ಪ್ರಮುಖರು ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸಿದರು.

ಕೊಡವ ಬುಡಕಟ್ಟು ಜನಾಂಗಕ್ಕೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು, ಎಸ್‌ಟಿ ಟ್ಯಾಗ್ ಮೂಲಕ ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು, ಸಂವಿಧಾನದ 25 ಮತ್ತು 26ನೇ ವಿಧಿಗಳಡಿಯಲ್ಲಿ ಕೊಡವ ಬುಡಕಟ್ಟು ಜನಾಂಗದ “ಸಂಸ್ಕಾರ ಗನ್” ಗೆ ಖಾತರಿ ನೀಡಬೇಕು, ಕೊಡವ ಭಾಷೆಯನ್ನು 8ನೇ ಷೆಡ್ಯೂಲ್‌ಗೆ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.

ಪ್ರಮುಖರಾದ ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ಮಂದಪಂಡ ಮನೋಜ್, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಚೀಯಬೇರ ಸತೀಶ್ ಹಾಜರಿದ್ದು, ಪುಷ್ಪ ನಮನ ಸಲ್ಲಿಸಿದರು.

Ashika S

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

15 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

25 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

40 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

54 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

56 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago