News Karnataka Kannada
Thursday, May 02 2024
ಮಡಿಕೇರಿ

ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
Photo Credit : NewsKarnataka

ಮಡಿಕೇರಿ : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ಪ್ರದೇಶದ ಒಳಗೆ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ ಸಿಬ್ಬಂದಿಗಳನ್ನು ಹೊರತುಪಡಿಸಿ, ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು