Categories: ಮಡಿಕೇರಿ

ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಡಿಕೇರಿ : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ಪ್ರದೇಶದ ಒಳಗೆ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ ಸಿಬ್ಬಂದಿಗಳನ್ನು ಹೊರತುಪಡಿಸಿ, ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.

Chaitra Kulal

Recent Posts

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

9 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

13 mins ago

ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್‌.ಡಿ ರೇವಣ್ಣ

ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ…

28 mins ago

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೋದಿ ನಾಮಿನೇಶನ್‌ ಮಾಡುವ…

29 mins ago

ಮೋದಿಗೆ ಚುನಾವಣೆ ಸ್ಪರ್ಧೆಯಿಂದ ನಿಷೇಧ ಹೇರುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

ದ್ವೇಷ ಭಾಷಣ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ನಿಷೇಧ ಹೇರುವಂತೆ…

44 mins ago

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ…

1 hour ago