News Karnataka Kannada
Sunday, April 14 2024
Cricket
ಮಡಿಕೇರಿ

ಎಚ್‌ಡಿಕೆ ಆತುರದಲ್ಲಿ ಬುಲೆಟ್ ಹಾರಿಸುವುದು ಬೇಡ: ಸಚಿವ ಬೋಸರಾಜ್

Respond patiently: Minister Boseraj's advice to Kumaraswamy
Photo Credit : News Kannada

ತಲಕಾವೇರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿರುವ ಟ್ವೀಟ್’ಗೆ ಸಚಿವ ಬೋಸರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದವರು, ಅವರಿಗೆ ಸ್ವಲ್ಪ ತಾಳ್ಮೆ ಎನ್ನುವುದು ಇರಬೇಕು. ಆತುರದಲ್ಲಿ ಬುಲೆಟ್ ಹಾರಿಸುವುದು ಬೇಡ, ಅದರ ಬದಲು ಅವರು ಸರ್ಕಾರಕ್ಕೆ ಸಲಹೆ ಕೊಡಲಿ ಎಂದಿದ್ದಾರೆ.

ಈಗಾಗಲೇ ಅವರು ಜನರಿಂದ ತಿರಸ್ಕೃತರಾಗಿದ್ದಾರೆ. ಇದೇ ರೀತಿ ವರ್ತಿಸಿದರೆ ಇನ್ನಷ್ಟೂ ತಿರಸ್ಕೃತರಾಗುತ್ತಾರೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮಿಷನ್‌ಗಾಗಿ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿ ತಡೆಹಿಡಿದಿದೆ ಎಂಬ ಕಾರಜೋಳ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಗರು ತಮ್ಮೊಳಗೆ ಬಡಿದಾಡಿಕೊಳ್ಳುತ್ತಿದ್ದಾರೆ. ಅದನ್ನು ಮರೆಮಾಚಲು ಇಂತಹ ಆರೋಪ ಮಾಡ್ತಿದ್ದಾರೆ. ಯಾವುದೇ ಸರ್ಕಾರ ಬಂದಾಗಲೂ ಕೆಲಸ‌ ಮಾಡಲು ಸಮಯ ಬೇಕಾಗುತ್ತದೆ. ಗೋವಿಂದ ಕಾರಜೋಳ ಮತ್ತು ಬಿಜೆಪಿಗರ ಕಾರ್ಯ ನೋಡಿ ಜನ ತಿರಸ್ಕಾರ ಮಾಡಿದ್ದಾರೆ. ಸದ್ಯದಲ್ಲೇ ಅಧಿವೇಶನ ಆರಂಭವಾಗುತ್ತದೆ, ಎಲ್ಲರೂ ಅನುಭವಿಗಳಿದ್ದೇವೆ, ಜನಪರ ಆಡಳಿತ ನಡೆಸುತ್ತೇವೆ ಎಂದರು.

ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಧರಣಿ ಕೂರುತ್ತೇವೆ ಎಂಬ ಯಡಿಯೂರಪ್ಪರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮೂರ್ನಾಲ್ಕು ಬಾರಿ ಸಿಎಂ ಆಗಿದ್ದವರು. ಸಮಯ ಹಿಡಿಯೋದು ಅವರಿಗೆ ಗೊತ್ತಿಲ್ವಾ? ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ 7 ಕೆಜಿ ಕೊಡ್ತಿತ್ತು ಅದನ್ನು ಬಿಜೆಪಿ 5 ಕೆಜಿಗೆ ಇಳಿಸಿದ್ದು ಯಾಕೆ? ಇದನ್ನು ಯಡಿಯೂರಪ್ಪ,ರಾಜ್ಯದ ಬಿಜೆಪಿ ಸಂಸದರು ಯಾಕೆ ಪ್ರಶ್ನೆ ಮಾಡುವುದಿಲ್ಲ . ಅಕ್ಕಿಯನ್ನು ಮೋದಿ ಏನು ಅವರ ಮನೆಯಿಂದ ತಂದು ಕೊಡುತ್ತಾರಾ- ಎಂದು ಬೋಸರಾಜ್ ಪ್ರಶ್ನೆ ಮಾಡಿದರು. ಆಹಾರ ಭದ್ರತಾ ಕಾಯ್ದೆಯಲ್ಲಿ ಕೆಲವು ನಿಯಮಗಳಿವೆ ಆ ಪ್ರಕಾರವೇ ನಾವು ಆಹಾರ ವಿತರಿಸುತ್ತೇವೆ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು