News Karnataka Kannada
Monday, April 29 2024
ಮಡಿಕೇರಿ

ಕುಶಾಲನಗರ ಬಳಿ ಸ್ಕೂಟಿಗೆ ಬಸ್ ಡಿಕ್ಕಿ: ಮಹಿಳೆ ಸಾವು

ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕುಶಾಲನಗರ ಬಳಿಯ ಗುಡ್ಡೆಹೊಸೂರು ಹೆದ್ದಾರಿಯಲ್ಲಿ ನಡೆದಿದೆ.
Photo Credit : By Author

ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಕುಶಾಲನಗರ ಬಳಿಯ ಗುಡ್ಡೆಹೊಸೂರು ಹೆದ್ದಾರಿಯಲ್ಲಿ ನಡೆದಿದೆ.

ಸಿದ್ದಾಪುರದ ನಿವಾಸಿ, ಕುಶಾಲನಗರದ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಲಲಿತಾ (53) ಮೃತ  ಮಹಿಳೆ. ಮೃತ ಲಲಿತಾ ಅವರು ತಮ್ಮ ಸಹೋದರಿಯ ಪುತ್ರಿ ಸಿಂಚನಾ ಎಂಬುವರ ಸ್ಕೂಟಿಯಲ್ಲಿ ಅತ್ತೂರಿನಿಂದ ಗುಡ್ಡೆಹೊಸೂರಿಗೆ ತೆರಳುತ್ತಿದ್ದ ವೇಳೆ ಗುಡ್ಡೆಹೊಸೂರು ಹೆದ್ದಾರಿಯಲ್ಲಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್. ಆರ್‌.ಟಿ.ಸಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಲಲಿತಾ ಅವರಿಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟರೆ ಸಿಂಚನಾ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು