ಮಡಿಕೇರಿ

ಸೋಮವಾರಪೇಟೆ: ರೈತರ ಕೆಲಸ ತ್ವರಿತವಾಗಿ ಮಾಡಿಕೊಡಲು ಮನವಿ

ಸೋಮವಾರಪೇಟೆ: ತಾಲ್ಲೂಕು ಕಚೇರಿ ಹಾಗೂ ನಾಡಕಚೇರಿಗಳಲ್ಲಿ ರೈತರ ಕೆಲಸಗಳು ನಿಗದಿತ ಸಮಯದಲ್ಲಿ ಮಾಡಿಕೊಡಲು ಕ್ರಮಕೈಗೊಳ್ಳುವಂತೆ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಎಸ್.ಎನ್.ನರಗುಂದ್ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರದಂದು ತಾಲ್ಲೂಕು ಕಚೇರಿಗೆ ತೆರಳಿದ ರೈತಸಂಘದ ಪದಾಧಿಕಾರಿಗಳು ಶಾಂತಳ್ಳಿ ಹೋಬಳಿಯಲ್ಲಿ ಗ್ರಾಮಲೆಕ್ಕಿಗರು ನಿಗದಿತ ಸಮಯದಲ್ಲಿ ಸಿಗುತ್ತಿಲ್ಲ. ಈ ಹಿಂದೆ ಕೂತಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳು ರೈತರ ಸಮಸ್ಯೆ ಆಲಿಸಿದರು. ಕೂಡಲೆ ಪೌತಿ ಖಾತೆ ಮಾಡಿಕೊಡುವಂತೆ ತಿಳಿಸಿದ್ದರು. ಆದರೆ ಇದುವರಗೆ ಒಂದು ಪೌತಿ ಖಾತೆಯನ್ನು ಮಾಡಿಸಿಕೊಟ್ಟಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್ ತಿಳಿಸಿದರು.

ಚುನಾವಣೆ ಸಂಬoಧಿತ ಸಭೆ ಎಂಬ ನೆಪದಲ್ಲಿ ಗ್ರಾಮಲೆಕ್ಕಿಗರು ರೈತರ ಕೈಗೆ ಸಿಗುತ್ತಿಲ್ಲ. ಇನ್ನು ಚುನಾವಣೆ ದಿನಾಂಕವೇ ನಿಗದಿಯಾಗಿಲ್ಲ. ಈಗಿಂದಲೆ ರೈತರ ಕೆಲಸ ಆಗುತ್ತಿಲ್ಲ. ಮುಂದಿನ ಪರಿಸ್ಥಿತಿ ಏನಾಗಲಿದೆಯೋ ಎಂದು ಪ್ರಶ್ನಿಸಿದರು. ಚುನಾವಣೆ ದಿನಾಂಕ ಪ್ರಕಟವಾದರೂ ತಾಲ್ಲೂಕು ಕಚೇರಿಯಲ್ಲಿ ರೈತರಿಗೆ ಆಗಬೇಕಾದ ಕೆಲಸಗಳು, ವಿದ್ಯಾರ್ಥಿಗಳಿಗೆ ಆದಾಯ, ಜಾತಿದೃಢೀಕರಣ ಪತ್ರಗಳು ಸಕಾಲಕ್ಕೆ ಸಿಗುವಂತಾಗಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

ರೈತರ ಕೆಲಸಗಳನ್ನು ಸಕಾಲದಲ್ಲಿ ಮಾಡಲು ಕ್ರಮಕೈಗೊಳ್ಳಲಾಗುವುದು. ಅರ್ಜಿಗಳ ವಿಲೇವಾರಿ ವಿಳಂಬ ಇನ್ನಿತರ ಸಮಸ್ಯೆಗಳಿದ್ದರೆ ತನ್ನ ಗಮನಕ್ಕೆ ತಂದರೆ, ತ್ವರಿತ ಅರ್ಜಿ ವಿಲೇವಾರಿಗೆ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ನರಗುಂದ ರೈತ ಮುಖಂಡರಿಗೆ ಭರವಸೆ ನೀಡಿದರು.

ಅನೇಕ ರೈತರ ದುರಸ್ತಿ ಫೈಲುಗಳು ಕೆಲ ವರ್ಷಗಳಿಂದ ತಾಲ್ಲೂಕು ಕಚೇರಿಯಲ್ಲೇ ಧೂಳು ತಿನ್ನುತ್ತಿವೆ. ಆದರೆ ನಗರ ಪ್ರದೇಶದ ಶ್ರೀಮಂತರ ದುರಸ್ತಿ ಫೈಲ್‌ಗಳು ಒಂದು ತಿಂಗಳಲ್ಲೇ ವಿಲೇವಾರಿ ಆಗಿ ದುರಸ್ತಿಯಾಗಿರುವ ಪವಾಡಗಳು ನಡೆಯುತ್ತಿವೆ ಎಂದು ಲಿಂಗೇರಿ ರಾಜೇಶ್ ಹೇಳಿದರು. ತಮ್ಮ ಜಾಗದ ದುರಸ್ತಿ ಕಡತ ಮೂರು ವರ್ಷದಿಂದ ತಾಲ್ಲೂಕು ಕಚೇರಿಯಲ್ಲೇ ಧೂಳು ತಿನ್ನುತ್ತಿರುವ ಬಗ್ಗೆ ರೈತ ಸಂಘದ ಉಪಾಧ್ಯಕ್ಷ ಜಿ.ಎಂ.ಹೂವಯ್ಯ ಹೇಳಿದರು. ವಿಲೇವಾರಿಗೆ ಕ್ರಮಕೈಗೊಳ್ಳುವ ಬಗ್ಗೆ ತಹಸೀಲ್ದಾರ್ ಭರವಸೆ ನೀಡಿದರು. ಅನೇಕ ರೈತರು ತಮ್ಮ ಆಹವಾಲು ಹೇಳಿದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago