News Karnataka Kannada
Thursday, May 02 2024
ಮಡಿಕೇರಿ

ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ವಿದ್ಯಾರ್ಥಿ ಸಾವು, ಮತ್ತೊಬ್ಬ ಸವಾರ ಆತ್ಮಹತ್ಯೆ

ಎರಡು ದ್ವಿಚಕ್ರಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.
Photo Credit : By Author

ಮಡಿಕೇರಿ: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರ ವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

ಮಡಿಕೇರಿ ಬಳಿಯ ಹೆರವನಾಡು ನಿವಾಸಿ ತಮ್ಮಯ್ಯ(57) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಇವರು ಶುಕ್ರವಾರ ಮಡಿಕೇರಿ ಸಮೀಪದ ಚೈನ್ ಗೇಟ್ ಬಳಿ ತಮ್ಮ ವಾಹದಲ್ಲಿ ತೆರಳುವಾಗ ಎದುರಿನಿಂದ ಬಂದ ದ್ವಿಚಕ್ರ ವಾಹನಕ್ಕೆ ಪರಸ್ಪರ ಡಿಕ್ಕಿ ಸಂಭವಿಸಿತ್ತು. ಪರಿಣಾ ವಾಹನ ಚಾಲನೆ ಮಾಡುತ್ತಿದ್ದ ಸವಾರ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಹಾಗೂ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ ಗಂಭೀರ ಗಾಯಗೊಂಡಿದ್ದನು.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದನು. ಈ ವಿಷಯ ತಿಳಿದ ತಮ್ಮಯ್ಯ ಅವರು ಬೇಸರಗೊಂಡಿದ್ದಲ್ಲದೆ, ಅಪಘಾತಕ್ಕೆ ಮತ್ತು ವಿದ್ಯಾರ್ಥಿ ಸಾವಿಗೆ ನಾನೇ ಕಾರಣ ಎಂದು ನೊಂದು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು