News Karnataka Kannada
Saturday, April 20 2024
Cricket
ಮಡಿಕೇರಿ

ತೀರ್ಥೋದ್ಭವಕ್ಕೆ ಕ್ಷಣಗಣನೆ: ಕರುನಾಡಿಗೆ ಬಂದೊದಗಿದ ಸಂಕಷ್ಟ ತಾಯಿ ಕಾವೇರಿ ಪರಿಹರಿಸಲಿ

Kaver
Photo Credit : News Kannada

ಮಡಿಕೇರಿ: ಸೂರ್ಯನು ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸುವ ಕರ್ಕಾಟಕ ಲಗ್ನದಲ್ಲಿ ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅ.17 ಮಂಗಳವಾರದ ಮಧ್ಯರಾತ್ರಿ 1.27ಕ್ಕೆ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಕ್ಷಣಗಳಿಗಾಗಿ ಸುತ್ತಲೂ ನೆರೆದ ಭಕ್ತರು ಕಾಯುತ್ತಿದ್ದಾರೆ.

ಈ ಬಾರಿ ಮುಂಗಾರು ಉತ್ತಮವಾಗಿರದ ಕಾರಣದಿಂದಾಗಿ ಕಾವೇರಿ ಕಿಚ್ಚು ಜೋರಾಗಿದೆ. ಇಂತಹ ಸಂದರ್ಭದಲ್ಲಿ ತಾಯಿ ಕಾವೇರಿ ಭಕ್ತರಿಗೆ ದರ್ಶನ ನೀಡುತ್ತಿರುವುದು ಎಲ್ಲರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಅಷ್ಟೇ ಅಲ್ಲದೆ ಈಗ ಕಾವೇರಿ ಕಣಿವೆಯಲ್ಲಿ ಬಂದೊದಗಿದ ಸಂಕಷ್ಟ ದೂರವಾಗಬೇಕಾದರೆ ಕಾವೇರಿಯಿಂದ ಮಾತ್ರ ಸಾಧ‍್ಯವಾಗಲಿದೆ. ಹೀಗಾಗಿ ಆಕೆಯಷ್ಟೆ ದಯೆ ತೋರಿಸಬೇಕಾಗಿದೆ.

ಲೋಕ ಕಲ್ಯಾಣಕ್ಕೆಂದೇ ತಲಕಾವೇರಿಯಿಂದ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಬಳಿಕ ಕರ್ನಾಟಕದಲ್ಲಿ ಸುಮಾರು 381 ಕಿ.ಮೀ. ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿ.ಮೀ. ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುವುದರೊಂದಿಗೆ ತಾನು ಹರಿದಲೆಲ್ಲಾ ಪವಿತ್ರಕ್ಷೇತ್ರಗಳನ್ನು ಸೃಷ್ಟಿಸಿ, ಲಕ್ಷಾಂತರ ಮಂದಿಯ ಪಾಲಿಗೆ ಅನ್ನದಾತೆಯಾಗಿದ್ದಾಳೆ ಎನ್ನುವುದು ಗೊತ್ತಿರುವ ವಿಚಾರವೇ..

ಕಾವೇರಿ ಬಗ್ಗೆ ತಿಳಿಯುತ್ತಾ ಹೋದರೆ ಆಕೆ ಹುಟ್ಟಿದ್ದೇ ಲೋಕ ಕಲ್ಯಾಣಕ್ಕಾಗಿ ಎಂಬುದು ಮನದಟ್ಟಾಗುತ್ತದೆ. ಹೀಗಾಗಿ ಆಕೆಯನ್ನು ತಂದೆ ಕವೇರನು ಅಗಸ್ತ್ಯ ಮುನಿಗೆ ಮದುವೆ ಮಾಡಿಕೊಟ್ಟರೂ ಆಕೆ ವಿವಾಹವಾಗುವ ಮುನ್ನ ನನಗೆ ಜನಕಲ್ಯಾಣ ಮಾಡುವ ಅಭಿಲಾಷೆಯಿದ್ದು, ನೀವು ಸದಾ ನನ್ನೊಂದಿಗೆ ಇರಬೇಕು ಒಂದು ವೇಳೆ ನನ್ನನ್ನು ನೀವು ಉಪೇಕ್ಷಿಸಿ ಎಲ್ಲೂ ಹೋಗಬಾರದು ಹಾಗೊಂದು ವೇಳೆ ನನ್ನನ್ನು ಒಬ್ಬಂಟಿಯಾಗಿ ಬಿಟ್ಟು ಹೋದದ್ದೇ ಆದರೆ ನಾನು ನದಿಯಾಗಿ ಹರಿಯುವುದಾಗಿ ಭಾಷೆ ಪಡೆದುಕೊಂಡಿರುತ್ತಾಳೆ.

ಕಾವೇರಿಗೆ ಕೊಟ್ಟ ಮಾತಿನಂತೆ ಅಗಸ್ತ್ಯ ಮುನಿಗಳು ತಮ್ಮ ಆಶ್ರಮದಲ್ಲಿ ಕಾವೇರಿಯೊಂದಿಗೆ ಆನಂದದಿಂದ ದಿನ ಕಳೆಯುತ್ತಿರುತ್ತಾರೆ. ಒಂದು ದಿನ ಅಗಸ್ತ್ಯ ಮುನಿಗಳು ತಾವಿದ್ದ ಆಶ್ರಮದಿಂದ ಬೆಟ್ಟದಾಚೆಗಿರುವ ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೊರಡುತ್ತಾರೆ. ಕಾವೇರಿ ನಿದ್ದೆಯಲ್ಲಿರುವುದರಿಂದ ಅವಳು ಎಚ್ಚರವಾಗುವ ವೇಳೆಗೆ ಹಿಂತಿರುಗಿ ಬರಬಹುದೆಂದುಕೊಳ್ಳುತ್ತಾರೆ. ಆದರೆ ಅಗಸ್ತ್ಯ ಮುನಿಗಳು ಅತ್ತ ಸ್ನಾನಕ್ಕೆ ತೆರಳುತ್ತಿದ್ದಂತೆಯೇ ಇತ್ತ ನಿದ್ದೆಯಲ್ಲಿದ್ದ ಕಾವೇರಿಗೆ ಎಚ್ಚರವಾಗುತ್ತದೆ. ಸನಿಹದಲ್ಲಿ ಅಗಸ್ತ್ಯಮುನಿಗಳು ಇಲ್ಲದನ್ನು ಕಂಡು ಆಕೆಗೆ ಪತಿಯ ಮೇಲೆ ಕೋಪಬರುತ್ತದೆ ಅಲ್ಲದೆ ಷರತ್ತು ಮೀರಿದ ಪತಿಯಿಂದ ದೂರವಾಗಿ ನದಿಯಾಗಿ ಹರಿದು ಲೋಕಕಲ್ಯಾಣ ಮಾಡಲು ಇದು ಸೂಕ್ತ ಸಮಯವೆಂದುಕೊಂಡು ಅಲ್ಲೇ ಇದ್ದ ಕೊಳಕ್ಕೆ ಇಳಿದು ಅಗಸ್ತ್ಯ ಮುನಿಗಳಿಗೆ ತಿಳಿಯದಂತೆ ಅಲ್ಲಿಂದ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರುತ್ತಾಳೆ. ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿಯುತ್ತಾಳೆ. ಹೀಗೆ ಲೋಕಕಲ್ಯಾಣಕ್ಕೆ ಹೊರಟ ಕಾವೇರಿ ಪ್ರತಿ ವರ್ಷ ತುಲಾ ಸಂಕ್ರಮಣದಂದು ಭಕ್ತರಿಗೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಜಲರೂಪಿಣಿಯಾಗಿ ದರ್ಶನ ನೀಡುತ್ತಾಳೆ ಎಂಬುದು ಭಕ್ತರ ನಂಬಿಕೆಯಾಗಿದೆ.

ಅದು ಏನೇ ಇರಲಿ ಇವತ್ತು ಕಾವೇರಿ ಹರಿದು ಹೋಗುವ ಕಡೆಯಲೆಲ್ಲ ಸಮೃದ್ಧವಾಗಿದೆ. ಅಷ್ಟೇ ಅಲ್ಲದೆ ಹಳ್ಳಿ, ಪಟ್ಟಣ, ನಗರದ ಜನರ ಜೀವನಾಡಿಯಾಗಿದ್ದಾಳೆ. ಹೀಗಿರುವಾಗ ಕಾವೇರಿ ಒಲಿದು ಮಳೆಯಾದರೆ ಜನ ಕೂಡ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು