ಮಡಿಕೇರಿ

ಕೊಡಗಿನಲ್ಲಿ ನಾಟಕೋತ್ಸವಕ್ಕೆ ಚಿಂತನೆ: ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ

ಮಡಿಕೇರಿ: ಕೊಡಗಿನಲ್ಲಿ ನಾಟಕೋತ್ಸವ ಆಯೋಜಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಹೇಳಿದರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ‘ಪರಶುರಾಮ’ ನಾಟಕ ಪ್ರದರ್ಶನ ಸಂದರ್ಭದಲ್ಲಿ ಮಾತನಾಡಿದರು.

ಮೈಸೂರು ಮತ್ತಿತರ ಭಾಗಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ನಾಟಕ ನೋಡುವವರ ಸಂಖ್ಯೆ ಕಡಿಮೆ ಇದೆ. ಇತರ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭ 9 ದಿನಗಳೂ ನಾಟಕ ಪ್ರದರ್ಶನ ಏರ್ಪಡಿಸಲಾಗುತ್ತದೆ. ಸಾಧ್ಯವಾದರೆ ಮಡಿಕೇರಿಯಲ್ಲೂ ಮುಂದಿನ ದಿನಗಳಲ್ಲಿ ಇಂತಹ ಪ್ರಯೋಗ ಮಾಡುವ ಪ್ರಯತ್ನ ನಡೆಸಲಾಗುವುದು ಎಂದರು.

ಪರಶುರಾಮ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಪುರಾಣದ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಇಂತಹ ನಾಟಕಗಳು ಸಹಾಯ ಮಾಡುತ್ತದೆ ಎಂದು ಹೇಳಿದರು.

ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಜಿಲ್ಲಾಧಿಕಾರಿ ಚಿಂತನೆಗೆ ಪೂರಕವಾಗಿ ಮಾತನಾಡಿ, ಸ್ಥಳೀಯ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಾಟಕೋತ್ಸವವನ್ನು ಎಲ್ಲರೂ ಸೇರಿ ಆಯೋಜನೆ ಮಾಡಬಹುದು. ವೈಯಕ್ತಿಕ ಮತ್ತು ವೃತ್ತಿ ಕಾರಣದಿಂದ ಒತ್ತಡದಲ್ಲಿ ಇರುವ ಇಂದಿನ ದಿನಗಳಲ್ಲಿ ಎಲ್ಲರೂ ಸೇರುವ ಮತ್ತು ಮನೋರಂಜನೆ ಪಡೆಯುವ ಅವಕಾಶಗಳು ಕಡಿಮೆ ಆಗುತ್ತಿದೆ. ನಾಟಕಗಳ ಮೂಲಕ ಮನೋಲ್ಲಾಸದ ಅವಕಾಶಗಳು ದೊರೆಯುವಂತಾಗಲಿ ಎಂದರು.
ಇದಕ್ಕೂ ಮೊದಲು ನಾಟಕ ಪ್ರದರ್ಶನ ಉದ್ಘಾಟಿಸಿದ ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ಮಾತನಾಡಿ, ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳು ಸೆಪ್ಟೆಂಬರ್ ತನಕವೂ ಮುಂದುವರಿಯಲಿದೆ ಎಂದರು.

ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಮಾತನಾಡಿ, ಪರಶುರಾಮ ಕ್ಷೇತ್ರದಿಂದ ಬಂದಿರುವ ಜೀವನ್‌ರಾಂ ಸುಳ್ಯ ಅವರ ನಾಟಕ ಮನೋರಂಜನ ಒದಗಿಸುವುದರ ಜೊತೆಗೆ ಅರ್ಥ ಗ್ರಹಿಸುವ ಶಕ್ತಿ ಮೂಲಕ ಪುರಾಣ ಲೋಕಕ್ಕೆ ಕರೆದುಕೊಂಡು ಹೋಯಿತು ಎಂದು ಹೇಳಿದರು.

ವಾರ್ತಾ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ನಾಟಕದ ನಿರ್ದೇಶಕ ಡಾ. ಜೀವನ್‌ರಾಂ ಸುಳ್ಯ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ ಮಾತನಾಡಿದರು.

ಕಲಾ ಶಿಕ್ಷಕ ಉ.ರಾ. ನಾಗೇಶ್, ಲೇಖಕಿ ಕೊಟ್ಟಕೇರಿಯನ ಲೀಲಾದಯಾನಂದ ಹಾಗೂ ಪುಟಾಣಿ ತಿಷ್ಯಾ ಪೊನ್ನೇಟಿ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊAಡರು. ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಕಾರ್ಯಕ್ರಮ ನಿರ್ವಹಿಸಿದರು.

Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

14 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

21 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

32 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

50 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 hour ago