News Karnataka Kannada
Monday, April 29 2024
ಮಡಿಕೇರಿ

ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಮತ್ತೆ ಭೂಕಂಪನ!

NEW DELHI: An earthquake hits north India
Photo Credit : IANS

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಮತ್ತೆ ಭೂಕಂಪನದ ಅನುಭವವಾಗಿದೆ. ಕೊಡಗು-ಕೇರಳ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗವಾದ ಕರಿಕೆ, ಸಂಪಾಜೆ, ಚೆಂಬು ಮುಂತಾದ ಕಡೆಗಳಲ್ಲಿ ಶನಿವಾರ ಮುಂಜಾನೆ 9.10ರ ಸುಮಾರಿಗೆ ಭೂ ಕಂಪನದ ಅನುಭವವಾಗಿದ್ದು, ಸುಮಾರು 3ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿರುವುದಾಗಿ ಹೇಳಲಾಗಿದೆ.

ಕೊಡಗಿಗೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಮುಂತಾದ ಕಡೆಗಳಲ್ಲೂ ಭೂ ಕಂಪನದ ಅನುಭವವಾಗಿದ್ದು, ಮನೆಯಲ್ಲಿದ್ದ ಪಾತ್ರೆಗಳು ಕೂಡಾ ಅಲುಗಾಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಅಲ್ಲದೆ ಭೂಮಿಯೊಳಗಿನಿಂದ ವಿಚಿತ್ರ ಶಬ್ಧ ಕೇಳಿ ಬಂದಿರುವುದಾಗಿಯೂ ಹೇಳಲಾಗಿದೆ. ಗುರುವಾರವಷ್ಟೇ ಉತ್ತರ ಕೊಡಗಿನ ಕೊಡ್ಲಿಪೇಟೆ ಹಾಗೂ ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂ ಕಂಪನದ ಅನುಭವವಾಗಿರುವ ಬೆನ್ನಲ್ಲೇ ಇದೀಗ ಮಡಿಕೇರಿ ತಾಲೂಕಿನ ಗಡಿ ಭಾಗದಲ್ಲೂ ಭೂಮಿ ಕಂಪಿಸಿರುವುದು ಜನರಲ್ಲಿ ಆತಂಕ ಸೃಷ್ಟಿದೆ.

2018ರಲ್ಲೂ ಇದೇ ರೀತಿ ಭೂಕಂಪನದ ಅನುಭವವಾದ ಬಳಿಕ ಮಳೆಗಾಲದಲ್ಲಿ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು