News Karnataka Kannada
Monday, April 29 2024
ಮಡಿಕೇರಿ

ಭಾಗಮಂಡಲ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ಯದುವೀರ್ ಪ್ರಚಾರ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು ಕೊಡಗಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
Photo Credit : By Author

ಮಡಿಕೇರಿ: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು ಕೊಡಗಿನಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಶುಕ್ರವಾರ ಭಾಗಮಂಡಲ ಹಾಗೂ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ
ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಅವರ ಜೊತೆಗಿದ್ದರು.

ಮುಂಬರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಯದುವೀರ್ ಅವರ ಗೆಲುವಿಗಾಗಿ ಇದೇ ಸಂದರ್ಭ ಬಿಜೆಪಿ ಪದಾಧಿಕಾರಿಗಳು ಪ್ರಾರ್ಥನೆ ಸಲ್ಲಿಸದರು. ಮಡಿಕೇರಿ ಯಿಂದ ನೇರವಾಗಿ ಭಾಗಮಂಡಲಕ್ಕೆ ಬೆಳಿಗ್ಗೆ ಆಗಮಿಸಿದ ಯದುವೀರ್ ಭಗಂಡೇಶ್ವರ ಸನ್ನಿಧಿಯಲ್ಲಿ ಸಂಕಲ್ಪದೊಂದಿಗೆ ಪೂಜೆ ಸಲ್ಲಿಸಿದರು.

ಆ ನಂತರ ತಲಕಾವೇರಿಗೆ ತೆರಳಿ ಅಗಸ್ತ್ಯ,ಗಣಪತಿ ಗುಡಿಗಳಲ್ಲೂ ಪೂಜೆ ಸಲ್ಲಿಸಿದರು. ಭಾಗಮಂಡಲ ಹಾಗೂ ತಲಕಾವೇರಿಯ ಪ್ರದೇಶವನ್ನು ವೀಕ್ಷಿಸಿದ ಯದುವೀರ್ ರವರು ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಮೆಚ್ಚಿ ಸಂತಸ ವ್ಯಕ್ತಪಡಿಸಿದರು. ಮಾಜಿ ಸಂಸದ ಪ್ರತಾಪ್ ಸಿಂಹ ಗೈರು ಹಾಜರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು