News Karnataka Kannada
Monday, April 29 2024
ಮಡಿಕೇರಿ

ಸಮಾಜದ ಸ್ವಾಸ್ಥ್ಯ ಕೆಡಿಸುವ ಸಂದೇಶ ರವಾನಿಸಿದ ಯುವಕನ ಬಂಧನ

ಕೊಡಗಿನ ಪ್ರತಿಷ್ಠಿತ ರೆಸಾರ್ಟ್ ವೊಂದರಲ್ಲಿ ಅಶ್ಲೀಲ ಪಾರ್ಟಿ ನಡೆಯುತ್ತಿದೆ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Photo Credit : By Author

ಮಡಿಕೇರಿ: ಕೊಡಗಿನ ಪ್ರತಿಷ್ಠಿತ ರೆಸಾರ್ಟ್ ವೊಂದರಲ್ಲಿ ಅಶ್ಲೀಲ ಪಾರ್ಟಿ ನಡೆಯುತ್ತಿದೆ ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಚಟುವಟಿಕೆಯ ಕಾರ್ಯಕ್ರಮಗಳಿಗೆ ಅವಕಾಶವಿದೆ ಎಂಬಂತಹ ಸಂದೇಶಗಳನ್ನು ತೇಲಿ ಬಿಡುವ ಮೂಲಕ ಸ್ವಾಸ್ಥ‍್ಯ ಕೆಡಿಸುತ್ತಿದ್ದು, ಆ ಮೂಲಕ ವಿಕೃತಿ ಮೆರೆಯುತ್ತಿದ್ದು, ಅಂತಹ ಯಾವುದೇ ಪೋಸ್ಟ್ ಗಳು ಕಂಡು ಬಂದರೂ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ.

ಬಾಳೆಲೆ ನಿವಾಸಿ ಶಯನ್(20) ಎಂಬಾತನೇ ಬಂಧಿತ ಆರೋಪಿ ಈತ Koki @ Shayan ಎಂಬ ಟ್ವಿಟರ್ ಖಾತೆಯಲ್ಲಿ “Guys thers is an group sex event in Madikeri Club Mahindra Resort, Rs.3,500/- per person Bro with safety secrecy maintained no HF 20-35 allowed” ಎಂಬುದಾಗಿ ಸಮಯ 04.31 ಘಂಟೆಗೆ ಎಂಬ ಅಶ್ಲೀಲ ಪ್ರಚೋದನಾಕಾರಿ ಸಂದೇಶವನ್ನು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಹರಿದಾಡಿದ್ದು, ಇದನ್ನು ನೋಡಿದ ಜನ ಜಿಲ್ಲಾ ಪೊಲೀಸ್ Social Media Monitoring Cell ನ ಅಧಿಕಾರಿ, ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಅದರಂತೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

2024 ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ ಹೊರಜಿಲ್ಲೆ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲಾತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕುರಿತು ಪೋಸ್ಟ್ ಮಾಡುವ ಸುಳ್ಳು ಸಂದೇಶಗಳ ಕುರಿತು ಎಚ್ಚರಿಕೆ ವಹಿಸುವುದು ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಪೊಲೀಸರು ತಿಳಿಸಿದ್ದಾರೆ.

ಒಂದು ವೇಳೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವ ರೀತಿಯ ಯಾವುದೇ ರೀತಿಯ ಅನೈತಿಕ, ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಕುರಿತು ಭಾವಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Facebook, Instagram, Twitter & etc.) ಹಂಚಿಕೊಂಡಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆಯೂ (ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ). ಪೊಲೀಸರು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು