ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ನಂಜನಗೂಡು ನಗರದ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ವೀರಗಣಾಚಾರಿ ಶಿವಶರಣ ಶ್ರೀ ಮಡಿವಾಳ ಮಾಚೀದೇವರ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು .
ಶ್ರೀ ಮಡಿವಾಳ ಮಾಚೀದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಗಪಡೆದ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು. ಶಿವಶರಣ ಶ್ರೀ ಮಡಿವಾಳ ಮಾಚೀದೇವರ ಮೆರವಣಿಗೆಯನ್ನು ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಿಂದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲದ ತನಕ ವಿವಿಧ ಜನಪದ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಆನಂದ್ ಗುರೂಜಿ, ಶ್ರೀ ವಿಜಯ್ ಲಿಂಗಂ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಎನ್ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಉಪಾಧ್ಯಕ್ಷೆ ರಿಯಾನಾ ಬಾನು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಎಂ ಶಂಕರ್, ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಮಡಿವಾಳ ಮಾಚಿದೇವರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಬಸವರಾಜು, ಸೇರಿದಂತೆ ಹಲವರು ಭಾಗವಹಿಸಿದ್ದರು.