Categories: ಮೈಸೂರು

ಮಹಿಷ ದಸರಾ-ಚಾಮುಂಡಿ ಚಲೋಗೆ ಅವಕಾಶ ನಿರಾಕರಣೆ

ಮೈಸೂರು: ವಿವಾದಕ್ಕೆ ಕಾರಣವಾಗಿದ್ದ ಮಹಿಷ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ಇದರಿಂದ ಎರಡು ಕಾರ್ಯಕ್ರಮಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಕುರಿತಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದ್ದು, ಚಾಮುಂಡಿ ಬೆಟ್ಟ ಚಲೋ ಜಾಥಾಗೂ ಅನುಮತಿ ನೀಡಿಲ್ಲ. ಅ.13ರಂದು ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 9.30ಕ್ಕೆ ಮಹಿಷನ ಪ್ರತಿಮೆಗೆ ಮುಷ್ಪಾರ್ಚನೆ ಮಾಡಲು ತೀರ್ಮಾನಿಸಲಾಗಿತ್ತು. ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯ ದ್ವಾರ ತಾವರೆಕಟ್ಟೆ ಬಳಿಯಿಂದ ಜಾಥಾ ನಡೆಸಿ, ಮೃಗಾಲಯದ ರಸ್ತೆ ಮೂಲಕ ಮೆರವಣಿಗೆ ಮಾಡಿ ಪುರಭವನದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ನಿರ್ಧರಿಸಲಾಗಿತ್ತು. ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಸಲು ಆಯೋಜನೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸ್ ಇಲಾಖೆ ಅನುಮತಿ ನೀಡುವಂತೆ ಮಹಿಷಾ ದಸರಾ ಆಚರಣಾ ಸಮಿತಿ ಮನವಿ ಮಾಡಿತ್ತು.

ಮಹಿಷ ದಸರಾ ಆಚರಣೆ ವಿರೋಧಿಸಿದ್ದ ಬಿಜೆಪಿ ಅ.13ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟ ಚಲೋಗೆ ಕರೆ ನೀಡಿತ್ತು. ಚಾಮುಂಡಿ ಬೆಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಇದೀಗ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಿಸಲಾಗಿದೆ.

ಒಂದು ವೇಳೆ ಅನುಮತಿ ನೀಡಿದರೆ ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿರುವ ಕಾರಣ ಮಹಿಷ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಎರಡಕ್ಕೂ ಬ್ರೇಕ್ ಹಾಕಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಎರಡೂ ಬಣಗಳಿಗೂ ಅನ್ವಯವಾಗುವಂತೆ ಪ್ರಕಟಣೆ ಹೊರಡಿಸಿದ್ದಾರೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago