Ad

ಪಶುಸಂಗೋಪನೆ ಸಚಿವರ ಕಿರುಕುಳ: ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ

ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕಿರುಕುಳದಿಂದ ಬೇಸತ್ತು ನಾನು ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪಿ.ಎಂ. ಪ್ರಸನ್ನ ತಿಳಿಸಿದ್ದಾರೆ.

ಮೈಸೂರು: ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕಿರುಕುಳದಿಂದ ಬೇಸತ್ತು ನಾನು ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪಿ.ಎಂ. ಪ್ರಸನ್ನ ತಿಳಿಸಿದ್ದಾರೆ.

Ad
300x250 2

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯದ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ರಾಜಕೀಯ ಕಾರಣಕ್ಕೆ ನನಗೆ ಬಹಳ ಕಿರುಕುಳ ಕೊಡುತ್ತಿದ್ದಾರೆ. ವಾಸ ದೃಢೀಕರಣ ಪತ್ರದ ವಿಚಾರದಲ್ಲಿ ಪದೇ ಪದೇ ನೋಟೀಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ. ನಾನು ರಾಜೀನಾಮೆ ಕೊಡದೆ ಇದ್ದರೆ, ಎಲ್ಲಾ ಪದಾಧಿಕಾರಿಗಳ ವಜಾಕ್ಕೆ ವಾಮಾಮಾರ್ಗದ ಮೂಲಕ ಯತ್ನ ಮಾಡುತ್ತಿದ್ದಾರೆ. ಈ ಕಾರಣಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad