Bengaluru 24°C
Ad

ಕಲುಷಿತ ನೀರು ಸೇವಿಸಿ ಯುವಕ ಸಾವು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Cm

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

Ad
300x250 2
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕನಕರಾಜು(20) ಮೃತ ದುರ್ದೈವಿ. ವಾಂತಿ ಭೇದಿಯಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಕನಕರಾಜು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರಕರಣ:
ಮೈಸೂರು ತಾ| ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಸೇವಿಸಿ ಗ್ರಾಮಸ್ಥರಿಗೆ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಐವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮಕ್ಕಳು,‌ ಮೂವರು ಮಹಿಳೆರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಗ್ರಾಮದ ಹಲವರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಕೆ.ಸಾಲುಂಡಿ ನೀರು ತುಂಬಿದ ಟ್ಯಾಂಕ್​ನಿಂದ ಮನೆಗಳಿಗೆ ನಲ್ಲಿ ಮೂಲಕ ನೀರು ಬರುತ್ತೆ. ಈ ನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ.

Ad
Ad
Nk Channel Final 21 09 2023
Ad