ಮೈಸೂರು: ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ 4 ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸುಮಾರು 50 ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.
ಶಾರದಮ್ಮ ಎಂಬುವರೇ ಸರ ಕಳೆದುಕೊಂಡ ಮಹಿಳೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

