ಮೈಸೂರು : ಜಿಲ್ಲಾ ಬಿಸಿಎಂ ವಿದ್ಯಾರ್ಥಿ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕುವೆಂಪು ನಗರದ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು.
ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲದ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಸ್ವಾಮಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ರಾಮಯ್ಯ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಆರ್. ಮಹದೇವ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾಧಿಕಾರಿ ರಾಘವೇಂದ್ರ ಮುಂತಾದವರು ಹಾಜರಿದ್ದರು.

