Categories: ಮೈಸೂರು

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟು: 84 ಅಡಿಗೆ ಇಳಿದ ನೀರಿನ ಮಟ್ಟ

ಮಂಡ್ಯ: ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 84 ಅಡಿಗೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದ ನೀರಿನ ಮಟ್ಟ 18 ಅಡಿ ಕಡಿಮೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಭಾನುವಾರ 84.80 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 102.80 ಅಡಿ ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ 508 ಕ್ಯೂಸೆಕ್ ಒಳಹರಿವಿದ್ದು ಜಲಾಶಯದಿಂದ 3726 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ ಜಲಾಶಯದ ಒಳಹರಿವು 16814 ಕ್ಯೂಸೆಕ್ ಇದ್ದರೆ, 6242 ಕ್ಯೂಸೆಕ್ ನೀರು ಬಿಡಲಾಗಿತ್ತು. ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿತ್ತು. ಇದರಿಂದ ಬೇಸಿಗೆ ಕಾಲದಲ್ಲಿಯೇ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿತ್ತು. ಈ ಬಾರಿ ಮಳೆ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿದೆ. ಪ್ರಸ್ತುತ ಜಲಾಶಯದಲ್ಲಿ ಸಂಗ್ರಹವಾಗಿರುವ ಕುಡಿಯಲು ನೀರಿಗೆ ಸಾಕಾಗುಷ್ಟು ಸಂಗ್ರಹವಿದೆ. ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವುದಿಲ್ಲ. ನಿರೀಕ್ಷೆಯಂತೆ ಮುಂಗಾರು ಮಳೆ ಬಂದರೆ ರೈತರಿಗೆ ನಿರಾಳವಾಗಲಿದೆ. ಕೃಷಿ ಚಟುವಟಿಕೆ ಆರಂಭಿಸಲು ಮುಂದಾಗಿರುವ ರೈತರು ಇದೀಗ ಮುಂಗಾರು ಮಳೆಯತ್ತ ಮುಖ ಮಾಡಿದ್ದಾರೆ.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

12 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

21 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

52 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

1 hour ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago