News Karnataka Kannada
Saturday, May 11 2024
ಮಂಡ್ಯ

ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದ ಜೊತೆಗೆ ನಾಲ್ಕು ದಿನ ಕಳೆದ ತಾಯಿ

Husband kills wife, cooks her in kadai
Photo Credit :

ಮಂಡ್ಯ: ಮಂಡ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಮಾನಸಿಕ ಅಸ್ವಸ್ಥೆ ತಾಯಿ ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದ ಜೊತೆಗೆ ನಾಲ್ಕು ದಿನ ಕಳೆದಿರುವ ಘಟನೆ ನಡೆದಿದೆ.

ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ನ್ಯೂ ತಮಿಳು ಕಾಲನಿಯ ನಿವಾಸಿಯಾದ ಗೃಹ ರಕ್ಷಕ ದಳದ ಸಿಬ್ಬಂದಿ ರೂಪಾ (32) ಅನಾರೋಗ್ಯದಿಂದ ಕಳೆದ ದಿನಗಳ ಹಿಂದೆ ಮೃತಪಟ್ಟಿದ್ದರು.

10 ವರ್ಷಗಳ ಹಿಂದೆ ವಿವಾಹವಾಗಿರುವ ಈಕೆಗೆ ಇಬ್ಬರು ಗಂಡುಮಕ್ಕಳಿದ್ದಾರೆ. ಆದರೆ ಐದು ವರ್ಷದಿಂದ ಗಂಡ, ಮಕ್ಕಳಿಂದ ದೂರವಾಗಿ ತಾಯಿಯೊಂದಿಗೆ ವಾಸವಿದ್ದರು. ತಾಯಿ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.

ಕಳೆದ ನಾಲ್ಕು ದಿನಗಳಿಂದ ರೂಪಾ ಕಾಣಿಸದಿರುವುದು ಸ್ಥಳೀಯರು ಗಮನಿಸಿದ್ದರು. ಈ ನಡುವೆ ಮನೆಯ ಒಳಗಿನಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಕಂಡು ಮನೆಗೆ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ರೂಪಾ ಶವ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು