ಮಂಡ್ಯ: 2016ರಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮಾಡಿದಂತ ರೈತರ ವಿರುದ್ಧ ದಾಖಲಾಗಿದ್ದಂತ ಪ್ರಕರಣ ಸಂಬಂಧ, ಇದೀಗ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ರೈತರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಈ ಕುರಿತಂತೆ ಮಂಡ್ಯ ಜಿಲ್ಲೆಯ ಪಾಂಡವಪುರದ 139 ರೈತರ ವಿರುದ್ಧ ಕಾವೇರಿ ನೀರಿಗಾಗಿ ಹೋರಾಟ ಮಾಡಿದಂತ ಸಂದರ್ಭದಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಬಾರಿ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜಕಾರಣಿಗಳಿಗೆ ರೈತರು ಪ್ರಕರಣ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದರು.
ಹೀಗೆ ಮನವಿ ಮಾಡಿದ್ದರೂ ರಾಜಕಾರಣಿಗಳ ನಿರ್ಲಕ್ಷ್ಯದಿಂದಾಗಿ ಇದುವರೆಗೆ ರೈತರ ವಿರುದ್ಧ ದಾಖಲಿಸಲಾಗಿದ್ದಂತ ಪ್ರಕರಣಗಳನ್ನು ವಾಪಾಸ್ ಪಡೆದಿರಲಿಲ್ಲ. ಈ ಹಿನ್ನಲೆಯಲ್ಲಿ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದರಿಂದಾಗಿ ರೈತರಿಗೆ ಕಾನೂನು ಹೋರಾಟ ಮಾಡೋದು ತಪ್ಪಿಲ್ಲ. ಒಂದು ತಿಂಗಳೊಳಗೆ ಪ್ರಕರಣ ವಾಪಾಸ್ ಪಡೆಯದೇ ಇದ್ದರೇ, ಉಪವಾಸ ಸತ್ಯಾಗ್ರಹ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ.