ಮಂಡ್ಯ: ಕಾಂಗ್ರೆಸ್ ಮುಖಂಡ, ಕಾವೇರಿ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ(94) ಶನಿವಾರ ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದ ಅವರು ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.