Categories: ಮಂಡ್ಯ

ಕುಂದುಕೊರತೆಗೆ ಕ್ಷಿಪ್ರಗತಿಯಲ್ಲಿ ಪರಿಹಾರ: ನ್ಯಾ.ಕೆ.ಎನ್ ಪಣೀಂದ್ರ

ಮಂಡ್ಯ: ಜಿಲ್ಲೆಯ ಸಾರ್ವಜನಿಕರಿಂದ 70 ಕುಂದುಕೊರತೆ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದ್ದು, ಆಯಾ ಇಲಾಖೆಗೆ ಸಂಬಂಧಿಸಿದಂತೆ  ಅರ್ಜಿಗಳನ್ನು ವಿಂಗಡಣೆ ಮಾಡಿ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡಿ ಕ್ಷಿಪ್ರಗತಿ ಸಾರ್ವಜನಿಕರ ಕುಂದು ಕೊರತೆ ಪರಿಹಾರ ಮಾಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಇಲಾಖೆಯ ಉಪ ಲೋಕಯುಕ್ತರಾದ ನ್ಯಾ.ಕೆ.ಎನ್ ಪಣೀಂದ್ರ  ತಿಳಿಸಿದರು.

ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕರಿಂದ ಸಾರ್ವಜನಿಕರ ಕುಂದುಕೊರತೆಗಳ ಸ್ವೀಕರಿಸಿದ  ಅಹವಾಲುಗಳನ್ನು ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಲೋಕಾಯುಕ್ತ ಸಂಸ್ಥೆಯಯೊಂದಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದ ಕಾನೂನು ಸೇವೆಗಳ ಸಮಿತಿಗೆ  ನಿಕಟವಾದ ಸಂಪರ್ಕವಿದೆ. ಜನರ ಸಮಸ್ಯೆಗಳು ಪರಿಹಾರ ಮಾಡುವುದಕ್ಕೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳ ಬೇಕು, ಅರ್ಜಿಗಳನ್ನು ಸ್ವೀಕಾರ ಮಾಡಿರುವುದನ್ನು ಸಾರ್ವಜನಿಕರಿಗೂ ಕೂಡ ಒಂದೊಂದು ನಕಲು ಪ್ರತಿಯನ್ನು ಕಳಿಸಿಕೊಟ್ಟು ಅವುಗಳ ಮುಖಾಂತರ ಅಧಿಕಾರಿಗಳನ್ನು ಕರೆಸಿ  ಪರಿಹಾರ ಕೊಡಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು.

ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನ ಯಾವ ರೀತಿ  ಸಾರ್ವಜನಿಕರಿಗೆ ತಲುಪಿಸಬೇಕು ಎಂಬುದರ ಬಗ್ಗೆ  ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಕಾಳಜಿ ಇದೆ. ಸಾರ್ವಜನಿಕರಿಗೆ ದೊರಕಾಬೇಕಿರುವ ಸವಲತ್ತುಗಳು, ಹಕ್ಕುಗಳು ಹಾಗೂ ದೊರಕಾಬೇಕಿರುವ  ಪರಿಹಾರವನ್ನು ಒದಗಿಸುವುದು ಲೋಕಾಯುಕ್ತದ ಉದ್ದೇಶ ಎಂದರು. ಸಾರ್ವಜನಿಕರ ಕುಂದುಕೊರತೆಯನ್ನು ಪರಿಹರಿಸಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ,  ಲೋಕಾಯುಕ್ತ ಪೊಲೀಸರು ಸಹ ಅರ್ಜಿಗಳನ್ನು ಸ್ವೀಕರಿಸಿ ಕೂಲಂಕುಶವಾಗಿ ಪರಿಶೀಲಿಸಿ ವರದಿಯನ್ನು ನೀಡುತ್ತಿದ್ದಾರೆ. ಅಧಿಕಾರಿಗಳನ್ನು   ಕರೆಸಿ ಮಾತನಾಡಿ ಕೆಲಸವನ್ನು ಪರಿಹರಿಸಲು ಎಷ್ಟು ಸಮಯ ಬೇಕು ಎಂಬುದನ್ನು ತಿಳಿದು ಅಷ್ಟುಸಮಯವನ್ನು ಅವರಿಗೆ ನೀಡಿ ಪರಿಹರಿಸಿ ಕೊಡಬೇಕು ಅವರು ಮಾಡಿರುವ ಕೆಲಸದ ಬಗ್ಗೆ ವರದಿ ಕೊಡಬೇಕು ಎಂದರು.

ಅಧಿಕಾರಿಗಳು ಸಾರ್ವಜಿನಿಕರ ಸಮಸ್ಯೆಯ ಸೂಕ್ತ ವರದಿಯನ್ನು  ಸಲ್ಲಿಸುವಲ್ಲಿ ವಿಫಲವಾದರೆ  ನೋಟಿಸ್ ಕೊಟ್ಟು ಕೂಲಂಕುಷವಾಗಿ ವಿಚಾರಣೆ ಮಾಡಿ ಅವರು ಕರ್ತವ್ಯದಲ್ಲಿ ಲೋಪ ಮಾಡಿದರೆ ಅವರ ಮೇಲೆ ಸರ್ಕಾರಕ್ಕೆ ಸೂಕ್ತ ಕ್ರಮ ಕೈ ಕೈಗೊಳ್ಳಲು  ಶಿಫಾರಸ್ಸು  ಮಾಡಲಾಗುವುದು. ಜಿಲ್ಲೆಯಲ್ಲಿನ ಗ್ರಾಮೀಣಾ ಪ್ರದೇಶಗಳಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನಿನ ಅರಿವು ಮೂಡಿಸುವ ಕಾರ್ಯಾಗಾರವನ್ನು ಆಯೋಜಿಸಿ ಸಾರ್ವಜನಿಕರ ಸವಲತ್ತುಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಪ್ರತಿಯೊಬ್ಬರಿಗೂ ಸರ್ಕಾರದ ಸವಲತ್ತುಗಳು ಸರಿಯಾದ ನಿಟ್ಟಿನಲ್ಲಿ ತಲುಪಲಿ ಎಂದು ಹೇಳಿದರು.

ಇದೇ ವೇಳೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಟ್ಟು  ನೀರೆರೆಯಲಾಯಿತು.

ಬೆಂಗಳೂರು ಲೋಕಾಯುಕ್ತ ಅಪರ ನಿಬಂಧಕರಾದ ಸೋಮರಾಜು, ಲೋಕಾಯುಕ್ತ ಉಪನಿಬಂಧಕರಾದ ಚೆನ್ನಕೇಶವ ರೆಡ್ಡಿ,  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ, ರಾಮನಗರ ವಿಭಾಗದ  ಲೋಕಾಯುಕ್ತ ಪೋಲಿಸ್ ಅಧೀಕ್ಷಕರಾದ ಪುಟ್ಟಮಾದಯ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ,  ಜಿಲ್ಲಾ ವಕೀಲರು ಸೇರಿದಂತೆ ಹಾಗು ಇತರರು ಉಪಸ್ಥಿತರಿದ್ದರು.

Sneha Gowda

Recent Posts

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

10 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

33 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

38 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

50 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

54 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

1 hour ago