ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಜವನಗಹಳ್ಳಿ ಬಳಿ ಕೊಳ್ಳೇಗಾಲ-ಮಳವಳ್ಳಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಒಬ್ಬ ಮೃತಪಟ್ಟರುವ ಘಟನೆ ನಡೆದಿದೆ.
ಕಾರಿನಲ್ಲಿದ್ದ ಗೋವಿಂದರಾಜು (28) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಮಳವಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಾಂಡವಪುರದಿಂದ ಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರೆಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.