Categories: ಮಂಡ್ಯ

ದುಬೈನಲ್ಲಿ ಉಚಿತ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ ಕನ್ನಡ ಮಿತ್ರರು

ಮಂಡ್ಯ: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಬೇಕೆ ಬೇಡವೇ ಎಂಬ ಗೊಂದಲದ ನಡುವೆ ದೂರದ ದುಬೈನಲ್ಲಿ ಕನ್ನಡ ಸಂಘದ ವತಿಯಿಂದ ನಡೆಯುತ್ತಿರುವ ಉಚಿತ ಕನ್ನಡ ಕಲಿಕಾ ಶಾಲೆಗಳು ಆರಂಭಗೊಂಡಿವೆ.

ದುಬೈನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲೆಯ ಮಹಾಪೋಷಕ ಪ್ರವೀಣ್‌ಕುಮಾರ್‌ಶೆಟ್ಟಿ, ಉಪಾಧ್ಯಕ್ಷ ಮೋಹನ್ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ ಆನ್‌ಲೈನ್ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ಉದ್ಯೋಗ ಅರಸಿ ದೂರದ ಅರಬ್ ಗಣತಂತ್ರ ರಾಷ್ಟ್ರಕ್ಕೆ ಬಂದಿರುವ ಕನ್ನಡಿಗರ ಮಕ್ಕಳಿಗೆ ಮಾತೃಭಾಷಾ ಸಾಕ್ಷರತೆ ಪ್ರತಿಯೊಬ್ಬ ಕನ್ನಡ ಕಂದಮ್ಮನ ಹಕ್ಕು ಎಂಬ ಘೋಷಣೆಯೊಂದಿಗೆ ಕನ್ನಡ ಮಿತ್ರರು ಎಂಬ ಸಂಘಟನೆ 2014 ರಲ್ಲಿ 40 ಮಕ್ಕಳೊಂದಿಗೆ ಆರಂಭವಾದ ಈ ಶಾಲೆಯಲ್ಲಿ ವಾರಂತ್ಯದಲ್ಲಿ ಮಾತ್ರ ಕನ್ನಡ ಕಲಿಸುವ ಮೂಲಕ ಎಲ್ಲ ಕನ್ನಡಿಗರ ಮಕ್ಕಳು ಕನ್ನಡ ಕಲಿಯಲು ಅನುವು ಮಾಡಿಕೊಟ್ಟಿದೆ.

ಕನ್ನಡ ವರ್ಣಮಾಲೆಯಿಂದ ಮೊದಲುಗೊಂಡು ಕನ್ನಡ ವಾಕ್ಯ ರಚನೆವರೆಗೂ ಪ್ರಾಥಮಿಕ , ಮಾಧ್ಯಮಿಕ , ಪ್ರೌಢ ಎಂಬ ವಿವಿಧ ತರಗತಿಗಳಲ್ಲಿ ಮಕ್ಕಳ ಕಲಿಕಾ ಮಟ್ಟಕ್ಕೆ ಅನುಸಾರವಾಗಿ ಕನ್ನಡ ಕಲಿಸಲಾಗುತ್ತಿದೆ. ಅರಬ್ಬರ ನಾಡಲ್ಲಿ ಕನ್ನಡ ಕಲಿಸುವ ಕನ್ನಡ ಮಿತ್ರರ ಆಸೆಗೆ ಜೊತೆಯಾಗಿ ತಮ್ಮ ವಾರದ ಒಂದು ರಜಾದಿನವನ್ನು ಉಚಿತವಾಗಿ ಕನ್ನಡ ಕಲಿಸಲು ಮುಡಿಪಿಟ್ಟಿರುವ ನಮ್ಮ ಕನ್ನಡತಿಯರೇ ಇಲ್ಲಿನ ಶಿಕ್ಷಕಿಯರು ಎಂಬುದು ಹೆಮ್ಮೆಯ ವಿಷಯ ಎಂದು ಮಹಾಪೋಷಕ ಪ್ರವೀಣ್ ಶೆಟ್ಟಿ ತಿಳಿಸುತ್ತಾರೆ.

ದುಬೈನಲ್ಲಿ ಅಲ್ಲಿನ ಭಾಷೆಯಲ್ಲೇ ವ್ಯವಹಾರ, ಮಾತುಕತೆ ನಡೆಯುತ್ತದೆ. ಸ್ವದೇಶಕ್ಕೆ ಮರಳಿದಾಗ ಕನ್ನಡ ಭಾಷೆಯಲ್ಲಿ ಮಾತನಾಡುವುದನ್ನು ಬಿಟ್ಟು ಬೇರೆ ಭಾಷೆಯಲ್ಲಿ ಹಳ್ಳಿಗಳಿಗೆ ತೆರಳಿ ತಮ್ಮ ಸ್ನೇಹಿತರು, ಆಪ್ತರು, ಸಂಬಂಧಿಗಳ ವಿಳಾಸ ಪತ್ತೆ ಮಾಡುವುದು ದುಸ್ತರ. ಇಂತಹ ಸನ್ನಿವೇಶವನ್ನು ಈಗಾಗಲೇ ಹಲವು ಅನಿವಾಸಿ ಭಾರತೀಯರು ಎದುರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದುಬೈನಲ್ಲಿರುವ ಎಲ್ಲ ಕನ್ನಡಿಗರ ಮಕ್ಕಳಿಗೂ ಕನ್ನಡ ಭಾಷೆಯನ್ನು ಕಲಿಸುವ ಉದ್ದೇಶ ಹೊಂದಿದ್ದೇವೆ ಎಂದು ವಿವರಿಸಿದರು.

ಕನ್ನಡ ಪಾಠಶಾಲೆ ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ಕನ್ನಡ ಮಿತ್ರರ ಕಾರ‌್ಯ ಶ್ಲಾಘನೀಯ. ಗಲ್ಪ್‌ನ ಎಲ್ಲ ಕನ್ನಡಿಗರೂ ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿ ಕನ್ನಡ ಭಾಷೆಯನ್ನು ಮುಂದಿನ ಪೀಳಿಗಿಗೂ ಉಳಿಸಿ ಎಂದು ಯುಎಇ ಸಂಘಟನೆ ಅಧ್ಯಕ್ಷ ಶ್ರೀಧರ್ ಸಲಹೆ ನೀಡಿದರು.

ಕನ್ನಡ ಮಿತ್ರರು ಸಂಘಟನೆಯ ಉಪಾಧ್ಯಕ್ಷ ಸಿದ್ದಲಿಂಗೇಶ್ ಅವರು ಶಾಲೆ ನಡೆದು ಬಂದ ದಾರಿ ಕುರಿತು ಮಾತನಾಡಿ ಎಲ್ಲ ಕನ್ನಡಿಗರು ಈ ಬಾರಿಯ ಆನ್ ಲೈನ್ ತರಗತಿಯ ಸದುಪಯೋಗ ಪಡೆದುಕೊಳ್ಳುವಂತೆ ಕರೆಕೊಟ್ಟರು. ಕಾರ್ಯದರ್ಶಿ ಸುನಿಲ್ ಗವಾಸ್ಕರ್ ಮಾತನಾಡಿ, ಕನ್ನಡ ಮಿತ್ರರು, ಯು.ಎ.ಇ ಸಂಘಟನೆಯ ಇತರ ಸಾಮಾಜಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಶೈಕ್ಷಣಿಕ ಚಟುವಟಿಕೆಯ ನೇತೃತ್ವ ವಹಿಸಿರುವ ರೂಪ ಶಶಿಧರ್ ಮಾತನಾಡಿ, ಈ ಬಾರಿಯ ಆನ್ ಲೈನ್ ತರಗತಿಗಳಿಗೆ ನಡೆಸಿರುವ ತಯಾರಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದ ಬಗ್ಗೆ ತಿಳಿಸಿಕೊಟ್ಟರು. ಯು.ಎ. ಇ ಸಂಘಟನೆ ಖಜಾಂಚಿ ನಾಗರಾಜ್‌ರಾವ್ ಹಾಗೂ ಮಾಧ್ಯಮ ಪ್ರಮಖ್ ಬಾನುಕುಮಾರ್, ಕನ್ನಡ ಶಿಕ್ಷಕಿಯರು ಕಾರ‌್ಯಕ್ರಮದಲ್ಲಿ ಭಾಗವಹಿಸಿದ್ದರು.

ಇಲ್ಲಿನ ಮಕ್ಕಳಿಗೆ ಕನ್ನಡ ಶಾಲೆ ಎಂದರೆ ಬಹಳ ಅಚ್ಚುಮೆಚ್ಚು. ಕೇವಲ ಮಾತೃ ಭಾಷೆ ಮಾತನಾಡುತ್ತಿದ್ದ ಮಕ್ಕಳು ಕನ್ನಡ ಭಾಷೆ ಓದಲು ಮತ್ತು ಬರೆಯಲು ಶುರು ಮಾಡಿರುವುದು ಈ ಶಾಲೆಗೆ ಅತಿ ದೊಡ್ಡ ಯಶಸ್ಸು.                                                                         – ರೂಪ ಶಶಿಧರ್, ಕನ್ನಡ ಶಾಲೆಯ ಮುಖ್ಯಸ್ಥರು.

ವಾರಾಂತ್ಯ ಬಂದರೆ ಮಕ್ಕಳ ಜೊತೆ ಹೊರಹೋಗಲು ಯೋಚಿಸುವವರೇ ಇರುವಾಗ ಆ ದಿನ ತಮ್ಮ ಮಕ್ಕಳಿಗೆ ನಮ್ಮ ಮಾತೃಭಾಷೆ ಕನ್ನಡ ಕಲಿಸುವ ಮೂಲಕ ದುಬೈನ ಕನ್ನಡ ಪಾಠಶಾಲೆ ಮತ್ತು ಅಲ್ಲಿನ ಪೋಷಕರು ಎಲ್ಲರಿಗೂ ಮಾದರಿ                – ಭಾನುಕುಮಾರ್, ದುಬೈ ಕನ್ನಡ ಸಂಘದ ಮಾಧ್ಯಮ ಪ್ರಮುಖ್

Sneha Gowda

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

10 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

28 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

36 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

55 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago