News Karnataka Kannada
Monday, April 29 2024
ಮಂಡ್ಯ

ಪತ್ನಿ ಕಿರುಕುಳದಿಂದ ಬೇಸತ್ತ ಪತಿ ಆತ್ಮಹತ್ಯೆ

Crime.
Photo Credit : News Kannada

ನಾಗಮಂಗಲ: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳಕ್ಕೆ ಬೇಸತ್ತಿದ್ದ ಪತಿಯೊಬ್ಬತನ್ನ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲದ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.

ಲಾಳನಕೆರೆ ಗ್ರಾಮದ ನಿವಾಸಿ ಗಂಗಾಧರ್ ಗೌಡ(38) ಮತ್ತು ಆತನ ಪುತ್ರ ಜಸ್ವಿತ್(07) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಗಂಗಾಧರ್ ಗೌಡ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಲ್ಲದೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು ಎಂದು ಬರೆಯಲಾಗಿದೆ.

ಮೂಲಗಳ ಪ್ರಕಾರ ಆಗಾಗ್ಗೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಈ ಹಿಂದೆಯೂ ಗ್ರಾಮಸ್ಥರು ನ್ಯಾಯ ಪಂಚಾಯಿತಿ ಮಾಡಿ ಬುದ್ಧಿ ಹೇಳಿದ್ದರು. ಆದರೆ, ನಿತ್ಯ ಗಂಡ – ಹೆಂಡತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಜಗಳ ನಡೆಯುತ್ತಿತ್ತು. ನಿತ್ಯ ಜಗಳದಿಂದ ಬೇಸತ್ತಿದ್ದ ಗಂಗಾಧರ್ ಗೌಡ ಮತ್ತು ಮಗ ಗುರುವಾರ ರಾತ್ರಿ ಗ್ರಾಮದ ಹೊರವಲಯದಲ್ಲಿರುವ ಹಳ್ಳಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಮತ್ತು ನನ್ನ ಮಗನ ಸಾವಿಗೆ ನನ್ನ ಹೆಂಡತಿ ಕಾರಣ, ಅವರನ್ನು ಶಿಕ್ಷಿಸಬೇಕು ಎಂದು ಡೆತ್ ನೋಟ್ ಬರೆದಿಟ್ಟು, ಹಗ್ಗದಲ್ಲಿ ಕೈಕಾಲುಗಳನ್ನು ಕಟ್ಟಿಕೊಂಡು ಹಳ್ಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿಯೇ ಸ್ನೇಹಿತರು ಅವರಿಗಾಗಿ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ.

ಶುಕ್ರವಾರ ಬೆಳಗ್ಗೆ ಗ್ರಾಮದ ಹೊರವಲಯದ ಹಳ್ಳದ ಪಕ್ಕದಲ್ಲಿ ಚಪ್ಪಲಿ, ಮೊಬೈಲ್ ಫೋನ್ ಹಾಗೂ ಡೆತ್ ನೋಟ್ ಪತ್ತೆ ಆದ ಹಿನ್ನೆಲೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ವೇಳೆ ತಂದೆ ಮಗನ ಶವ ಪತ್ತೆಯಾಗಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು