Categories: ಮಂಡ್ಯ

ಪ್ರಯಾಣಿಕರ ತಂಗುದಾಣದ ದುರಸ್ತಿಗೆ ಪಣತೊಟ್ಟ ಕಿರಣ್ ಬ್ರಿಗೇಡ್

ಕೆ.ಆರ್.ಪೇಟೆ: ಪ್ರತಿ ಭಾನುವಾರದಂದು ಯಾವುದಾದರೊಂದು ರೀತಿಯ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ.ಎಂ.ಕಿರಣ್ ಬ್ರಿಗೇಡ್ ಸಂಕಲ್ಪ ತೊಟ್ಟಿದ್ದು, ಈಗಾಗಲೇ ಗಬ್ಬೆದ್ದು ನಾರುತ್ತಿದ್ದ ಆನೆಗೊಳ ಗ್ರಾಮದ ಪ್ರಯಾಣಿಕರ ತಂಗುದಾಣ ಸ್ವಚ್ಛ ಗೊಳಿಸಿ ಸುಣ ಬಣ್ಣ ಬಳಿದು ಸುಂದರವಾಗಿ ಕಂಗೊಳಿಸುವಂತೆ ಮಾಡಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಬೇರೆ, ಬೇರೆ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿ.ಎಂ.ಕಿರಣ್ ಬ್ರಿಗೇಡ್ ಇದೀಗ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ  ಪ್ರಯಾಣಿಕರ ತಂಗುದಾಣಗಳು ಸಂಬಂಧಿಸಿದವರ ನಿರ್ಲಕ್ಷ್ಯದಿಂದ ಸುಣ್ಣ ಬಣ್ಣ ಕಾಣದೆ, ಗಬ್ಬೆದ್ದು ನಾರುತ್ತಿರುವುದಲ್ಲದೆ, ಸುತ್ತಮುತ್ತ ಗಿಡಗಂಟಿಗಳು ಪ್ರಯಾಣಿಕರು ಅದರತ್ತ ಸುಳಿಯದಂತಹ ಸ್ಥಿತಿಯಲ್ಲಿರುವ ಪ್ರಯಾಣಿಕರ ತಂಗುದಾಣದತ್ತ ಗಮನಹರಿಸಿ ಅವುಗಳನ್ನು ಸ್ವಚ್ಛಗೊಳಿಸುವುದಲ್ಲದೆ, ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಕಿರಣ್ ಬ್ರಿಗೇಡ್ ನ ಕಾರ್ಯವನ್ನು ಶ್ಲಾಘಿಸಿರುವ ಕೃಷ್ಣಾಪುರದ ಗ್ರಾಮದ ಮುಖಂಡ ಹರೀಶ್ ಅವರು, ಯಾವುದೇ ಅಧಿಕಾರ ಇಲ್ಲದೆ ಇದ್ದರೂ ಕೂಡ ಹೆಮ್ಮಾರಿ ಕೊರೊನಾದ ಮೊದಲನೆಯ ಹಾಗೂ ಎರಡನೇ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ 20 ಸಾವಿರಕ್ಕೂ ಹೆಚ್ಚು ಬಡಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿ ಮೂಲಕ ಮಾನವೀಯತೆ ಮೆರೆದಿದ್ದು,  ಇವರ ಸಮಾಜಮುಖಿ ಕಾರ್ಯದಿಂದ ಸಾರ್ವಜನಿಕರಿಗೆ ಒಳಿತಾಗಲಿ ಎಂದು ಹೇಳಿದ್ದಾರೆ.

ಇನ್ನು ಕರ್ನಾಟಕ ಕುಮಾರ ಪಡೆ ಉಪಾಧ್ಯಕ್ಷ ಹಾಗೂ ಬಿ ಎಂ ಕಿರಣ್ ಯುವ ಬ್ರಿಗೇಡ್ ಲೋಕೇಶ್ ಮತ್ತು ರಾಜೇಶ್ ಬಿ ಎಂ ಕಿರಣ್ ರವರ ಮಾರ್ಗದರ್ಶನ ಮೇರೆಗೆ ಪ್ರತಿ ಭಾನುವಾರ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಅಭಿಯಾನ ಮತ್ತು ಬಣ್ಣ ಹೊಡೆಯುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದಾಗಿ ಕಿರಣ್ ಯುವ ಬ್ರಿಗೇಡ್ ತಿಳಿಸಿದೆ.

ಈ ಸಂದರ್ಭದಲ್ಲಿ ಕುಮಾರಪಡೆ ಅಧ್ಯಕ್ಷರಾದ ನಟರಾಜ್, ಕುಮಾರಪಡೆ ತಾಲೂಕು ಉಪಾಧ್ಯಕ್ಷ ಲೋಕೇಶ್ ಸಾಧುಗೊನಹಳ್ಳಿ, ರಾಜೇಶ್, ಪ್ರವೀಣ್, ಅನಿಲ್, ಶಿವಣ್ಣ, ಗಣೇಶ್, ಸಂದೀಪ್, ಸುದೀಪ್, ನಿತಿನ್, ಪ್ರತಾಪ್, ಮಹೇಶ್ ಸೇರಿದಂತೆ ಉಪಸ್ಥಿತರಿದ್ದರು.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago