ಮಂಡ್ಯ: ಕಾಮಗಾರಿ ಮುಗಿಯುವ ಮುನ್ನವೇ ಭಾರೀ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ.
ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮಂಡ್ಯ ತಾಲೂಕಿನ ಇಂಡುವಾಳು ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿದಿದ್ದು ಹಾಗೂ ರಸ್ತೆ ಕೊಚ್ಚಿಕೊಂಡು ಹೋಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಘಟನಾ ಸ್ಥಳದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಬದಲಿ ರಸ್ತೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಕುಸಿದಿರುವ ರಸ್ತೆ ಹಾಗೂ ಸೇತುವೆ ದುರಸ್ಥಿ ಕಾರ್ಯ ಆರಂಭವಾಗಿದ್ದು, ಸರಾಗವಾಗಿ ನೀರು ಹರಿಯಲು ಹಿಟಾಚಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.