News Karnataka Kannada
Monday, May 06 2024
ಮಂಡ್ಯ

ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Karnataka Police
Photo Credit :

ಮಂಡ್ಯ: ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಳುವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೇ. ಕರೀಗೌಡರ ಪುತ್ರ ನಂಜುಂಡೇಗೌಡ (54) ಮೃತ ವ್ಯಕ್ತಿ.
ಗ್ರಾಮದ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆಯತಪ್ಪಿ ಬಿದ್ದ ನಂಜುಂಡೇಗೌಡರು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ ರತ್ನಮ್ಮ, ಪುತ್ರಸಂಜಯ್‌ಗೌಡ ಮತ್ತು ಪುತ್ರಿ ಚಂದನಾಗೌಡ ಇದ್ದಾರೆ. ಜಿಲ್ಲಾಸ್ಪತ್ರೆ ಶವಗಾರದಲ್ಲಿ ಮೃತರ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು