Categories: ಮಂಡ್ಯ

ಮಂಡ್ಯ: ಉದ್ಯೋಗ ಖಾತ್ರಿ ಅರಿವಿಗಾಗಿ ಬೀದಿ ನಾಟಕ

ಮಂಡ್ಯ: ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಹುಡುಕಿಕೊಂಡು ಕೂಲಿ ಕಾರ್ಮಿಕರು ವಲಸೆಹೋಗುತ್ತಿದ್ದು, ಇದನ್ನು ತಡೆಯುವ ಸಲುವಾಗಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾರಿ ತಂದಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿನಾಟಕಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಕಲಾ ತಂಡಗಳು ಗ್ರಾಮೀಣ ಪ್ರದೇಶಗಳಲ್ಲಿ ನಾಟಕಗಳ ಮೂಲಕ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅರಿವು ಮೂಡಿಸುತ್ತಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ನಾಗಮಂಗಲ ವತಿಯಿಂದ ನಾಗಮಂಗಲ ತಾಲೂಕಿನ ಆಯ್ದ 15 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕುರಿತು ಅರಿವು ಮತ್ತು ಜಾಗೃತಿ ಮೂಡಿಸುವ ಬೀದಿನಾಟಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಲಾ ತಂಡಗಳು ಆಯ್ದ ಸ್ಥಳಗಳಲ್ಲಿ ಬೀದಿ ನಾಟಕಳಗಳನ್ನು ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಜನರನ್ನು ಸೆಳೆಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಕಾರ್ಯಕ್ರಮದ ವೇಳೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಹಾಗೂ ಸಹಾಯಕ ನಿರ್ದೇಶಕಿ ಮೇನಕಾ,   ಐಇಸಿ ಸಂಯೋಜಕಿ ರೇಖಾ, ಶಿವಗಂಗಾ, ಸಾಂಸ್ಕೃತಿಕ ಕಲಾ ತಂಡದ ಕಲಾವಿದರಾದ ಸಂತೆಕಸಲಗೆರೆ ಬಸವರಾಜ್, ಮಂಟೇಲಿಂಗಯ್ಯ, ಅಂದಾನಿ, ಅನುಸೂಯ, ಸುವರ್ಣ ಗೀತಾ ಮತ್ತಿತರರು ಭಾಗವಹಿಸಿದ್ದರು.

Swathi MG

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

30 seconds ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

2 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

23 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

37 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

53 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

56 mins ago