ಮಂಡ್ಯ

ಮಂಡ್ಯ ಡಿಸಿಯ ಕಾರ್ಯ ಶ್ಲಾಘಿಸಿದ ಸಾರ್ವಜನಿಕರು

ಮಂಡ್ಯ: ಪೂರ್ವ ಮುಂಗಾರು ರಾಜ್ಯದಾದ್ಯಂತ ಅಲ್ಲಲ್ಲಿ ಸುರಿದಿದ್ದು, ಕೆಲವರಿಗೆ ಹಾನಿಯನ್ನು ಮಾಡಿದೆ. ಒಮ್ಮೆಲೆ ಸುರಿದ ಮಳೆ ಮತ್ತು ಗಾಳಿಗೆ ಹಲವು ಮನೆಗಳಿಗೆ ಹಾನಿಯಾಗಿದ್ದರೆ, ರೈತರು ಬೆಳೆದಿದ್ದ ಬಾಳೆ, ಜೋಳ ನೆಲ ಕಚ್ಚಿದೆ.

ಸಾಮಾನ್ಯವಾಗಿ ಈ ವೇಳೆಗೆ ಮಳೆ ಬರುವುದು ಮಾಮೂಲಿ. ಆದರೆ ಮಳೆ ರಭಸವಾಗಿ ಸುರಿಯುವುದಲ್ಲದೆ, ಗಾಳಿ ಬೀಸುವುದರಿಂದ ರೈತರು ಕಷ್ಟ ಪಟ್ಟು ಬೆಳೆಸಿದ ಬೆಳೆಗಳು ನೆಲ ಕಚ್ಚುತ್ತಿವೆ. ಇನ್ನು ಅಲ್ಲಲ್ಲಿ ಮಳೆ ಗಾಳಿಗೆ ಮರಗಳು ಮುರಿದು ಬೀಳುವುದು, ಮನೆಯ ಛಾವಣಿ ಹಾರಿ ಹೋಗುವುದು ಸಾಮಾನ್ಯವಾಗಿದ್ದು, ನಷ್ಟಗೊಂಡ ಬಡವರು ಪರದಾಡುವಂತಾಗಿದೆ.

ಬಹಳಷ್ಟು ಕಡೆ ಮಳೆಯಿಂದ ಅನಾಹುತವಾದರೆ ಜಿಲ್ಲಾಡಳಿತ ತಲೆ ಕೆಡಿಸಿಕೊಳ್ಳುವುದಿಲ್ಲ ಆದರೆ  ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವುದನ್ನು ಅರಿತು ಖುದ್ದು ತಾವೇ ಸ್ಥಳಕ್ಕೆ ತೆರಳಿ ಬಡವರ ಸಂಕಷ್ಟವನ್ನು ಅರಿಯುವ ಕೆಲಸ ಮಾಡುತ್ತಿದ್ದು, ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ  ಸಾಕಷ್ಟು ಹಾನಿಯಾಗಿತ್ತು. ಹೀಗಾಗಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ  ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಬುಧವಾರ ಭೇಟಿ ನೀಡಿದ್ದು, ಹಾನಿಯ ಕುರಿತಂತೆ ಪರಿಶೀಲನೆ ನಡೆಸಿದರು.

ಮಾಡುವಿನಕೋಡಿ ಗ್ರಾಮದಲ್ಲಿ 80ಕ್ಕೂ ಹೆಚ್ಚು ತೆಂಗಿನಮರಗಳಿಗೆ ಹಾನಿಯಾಗಿದ್ದು, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಅಕ್ಕಿಹೆಬ್ಬಾಳು ಗ್ರಾಮದಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು ನಿಯಮಾನುಸಾರ ಪರಿಶೀಲನೆ ನಡೆಸಿ ಪರಿಹಾರ ನೀಡುವಂತೆ  ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು  ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ತಹಶೀಲ್ದಾರ್  ಎಂ.ವಿ.ರೂಪ ಇದ್ದರು. ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರ ಕಾರ್ಯ ಚಟುವಟಿಕೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago