Categories: ಮಂಡ್ಯ

ಮಂಡ್ಯ: ಮಳೆಯ ಅಬ್ಬರಕ್ಕೆ ಕುಸಿದ ಶಾಲಾ ಛಾವಣಿ

ಮಂಡ್ಯ: ಕಳೆದ ಒಂದು ವಾರದಿಂದ ಮಳೆ ಸುರಿದ ಪರಿಣಾಮ ಮದ್ದೂರು ತಾಲೂಕಿನ ಮೆಣಸಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಬಿದ್ದಿದ್ದು  ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವು ಮನೆಗಳು ಕುಸಿದು ಬಿದ್ದಿದ್ದು, ಇದೀಗ ಮೆಣಸಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಬಿದ್ದಿರುವುದು ಆತಂಕ ತಂದಿದೆ. ಈ ಶಾಲಾ ಈ ಹಿಂದೆಯೇ ಶಿಥಿಲಗೊಂಡಿತ್ತು. ಸಂಬಂಧಿಸಿದವರು ಇತ್ತ ಗಮನಹರಿಸಿ ದುರಸ್ತಿಗೊಳಿಸಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಆದರೆ ಇದೀಗ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಕಟ್ಟಡ ಮೇಲ್ಚಾವಣಿ ಕುಸಿದಿದ್ದು ಮಕ್ಕಳು ಶಾಲೆಗೆ ಬರಲು ಭಯ ಪಡುವಂತಾಗಿದೆ.

ಶಾಲಾ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಅನೇಕ ಬಾರಿ ಗ್ರಾಮದ ಹಿರಿಯರು ಹಾಗೂ ಮುಖಂಡರು‌ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಬಿಇಓಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಇದೀಗ ಛಾವಣಿ ಕುಸಿಯುವಂತಾಗಿದೆ. ಈಗಾಗಲೇ ಈ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿಯುತ್ತಿವೆ. ಮಳೆ, ಗಾಳಿಯ ಅಬ್ಬರಕ್ಕೆ ತಾಲೂಕಿನ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೀಗಿರುವಾಗ ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳು ಯಾವಾಗ ಕುಸಿಯುತ್ತವೆಯೋ ಎಂಬ ಭಯ ಶುರುವಾಗಿದೆ.

ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ದುರಸ್ತಿಪಡಿಸಬೇಕಾಗಿದೆ. ಇಲ್ಲದೆ ಹೋದರೆ ದುರಂತಗಳು ಸಂಭವಿಸುವ ಸಾಧ್ಯತೆಗಳು ಇವೆ ಎಂದು ಸಾರ್ವಜನಿಕರು ಹೇಳಿದ್ದಾರೆ.

Ashika S

Recent Posts

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

9 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

14 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

39 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

48 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

1 hour ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago