ಮಂಡ್ಯ :ಮಂಡ್ಯ ಮಿಮ್ಸ್ ನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಕೇರಳ ಪ್ರವಾಸದಿಂದ ವಾಪಾಸ್ ಆದ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಮಂಡ್ಯ ಮಿಮ್ಸ್ ನ ಹಾಸ್ಟೆಲ್ ನಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.
ಕೇರಳ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇನ್ನೂ 145 ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಗೆ ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.