Categories: ಮಂಡ್ಯ

ಮಂಡ್ಯ: ಲಾರಿ ಚಕ್ರ ಬ್ಲಾಸ್ಟ್ ಆಗಿ ಚಾಲಕ ಸಜೀವ ದಹನ

ಮಂಡ್ಯ : ಲಾರಿ ಚಕ್ರ ಬ್ಲ್ಯಾಸ್ಟ್ ಆಗಿ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಎಲ್.ಐ.ಸಿ ಕಛೇರಿ ಮುಂಭಾಗ ಘಟನೆ ನಡೆದಿದ್ದು, ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎಲ್‌.ಐ.ಸಿ ಕಛೇರಿ ಬಳಿ ಬರುತ್ತಿದ್ದಂತೆ ಪಂಚರ್ ಆಗಿ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿ ಬೆಂಕಿ ಹೊತ್ತಿಕೊಂಡಿದೆ.ಲಾರಿಯ ಮುಂದಿನ ಭಾಗ ನಜ್ಜುಗುಜ್ಜಾದ ಹಿನ್ನೆಲೆಯಲ್ಲಿ ಲಾರಿಯಲ್ಲೆ ಚಾಲಕ ಸಿಲುಕಿ ಸಜೀವ ದಹನವಾಗಿದ್ದಾರೆ.

ಮೃತ ಲಾರಿ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಚಾಲಕನ ಶವ ಹೊರತೆಗೆಯಲಾಗಿದೆ. ಚಾಲಕನ ಶವ ಮದ್ದೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Swathi MG

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

4 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

7 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

22 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

37 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

45 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

59 mins ago