ಮಂಡ್ಯ

ಮೇಲುಕೋಟೆ ವೈರಮುಡಿ ಜಾತ್ರೆಗೆ ಸಿದ್ಧತೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ

ಮಂಡ್ಯ:ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸಾರ್ವಜನಿಕರಿಗೆ ಅವಕಾಶ ನೀಡದೆ ಸಾಂಪ್ರದಾಯಿಕ ಮತ್ತು ಸರಳವಾಗಿ ನಡೆದ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚಲುವ ನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವನ್ನು ಈ ಬಾರಿ ಹಿಂದಿನಂತೆಯೇ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಸಕ್ತ ವರ್ಷ ವೈರಮುಡಿಯು ಮಾರ್ಚ್ 9 ರಿಂದ 21 ರ ವರೆಗೆ ನಡೆಯಲಿದ್ದು, ಸುಮಾರು 13 ದಿನಗಳ ಕಾಲ ವಿವಿಧ ಸೇವೆಗಳು ಮತ್ತು  ಕಾರ್ಯಕ್ರಮಗಳು ಇರಲಿವೆ. ಹೀಗಾಗಿ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಸಬೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಈ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಇಲಾಖೆಗಳಿಂದ ಅನುದಾನ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳವಂತೆ ಸೂಚಿಸಿದರಲ್ಲದೆ, ಮಾರ್ಚ್ 14 ರಂದು ನಡೆಯುವ ವೈರಮುಡಿ ಕೀರಿಟಾಧಾರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನ ಮಾಡಲಾಗುವುದು ಎಂದು ತಿಳಿಸಿದರು.

ಪೂರ್ವ ಭಾವಿ ಸಭೆಯಲ್ಲಿ ಶಾಸಕ ಪುಟ್ಟರಾಜು, ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ, ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡು ಮಾಹಿತಿ ನೀಡಿದರು.ಇನ್ನು ಮೇಲುಕೋಟೆಯ ವೈರಮುಡಿ ಬಗ್ಗೆ ಹೇಳುವುದಾದರೆ ವೈರಮುಡಿ ಎಂಬುವುದು ವಜ್ರ ಖಚಿತ ಕಿರೀಟವಾಗಿದ್ದು, ಇದು ಶ್ರೀಮಾನ್ ನಾರಾಯಣನ ಕಿರೀಟವೆಂದೂ ದ್ವಾಪರಯುಗದಲ್ಲಿ ಕೃಷ್ಣನ ಮೂಲಕ ಚೆಲುವರಾಯನಿಗೆ ಗರುಡನಿಂದ ತೊಡಿಸಿದನೆಂಬುವುದು ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠದಿಂದ ರಾಕ್ಷಸ ವಿರೋಚನ ಕದ್ದಿದ್ದ ನಾರಾಯಣನ ಕಿರೀಟವನ್ನು ಗರುಡ ರಾಕ್ಷಸನೊಂದಿಗೆ ಹೋರಾಡಿ ಮರಳಿ ತಂದು ಚೆಲುವರಾಯನಿಗೆ ಅರ್ಪಿಸಿದನೆಂಬುದು ಜನವಲಯದಲ್ಲಿರುವ ನಂಬಿಕೆಯಾಗಿದೆ. ಇದನ್ನು ಚೆಲುವರಾಯಸ್ವಾಮಿಗೆ  ಧರಿಸುವ ಸಂದರ್ಭ ನಡೆಯುವ ಉತ್ಸವವೇ ವೈರಮುಡಿ ಬ್ರಹ್ಮೋತ್ಸವವಾಗಿದೆ.

Swathi MG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago