News Karnataka Kannada
Friday, May 03 2024
ಮಂಡ್ಯ

ಮೈಷುಗರ್ ಸರ್ಕಾರಿ ಸ್ವಾಮ್ಯದಲ್ಲೇ ಆರಂಭಿಸಲು ಒತ್ತಾಯ

New Project 2021 09 17t181619.000
Photo Credit :

ಮಂಡ್ಯ: ಖಾಸಗಿ ಗುತ್ತಿಗೆ ಅಥವಾ  ಓ ಅಂಡ್ ಎಂ ಯಾವುದೂ ಬೇಡ ಎಂದಿರುವ  ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಮೈಷುಗರ್ ಸರ್ಕಾರಿ ಸ್ವಾಮ್ಯದಲ್ಲೇ ಆರಂಭಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಕಾವೇರಿ ವನದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದ 5 ನೇ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಖಾಸಗಿಗೆ ವಹಿಸಿದ ಯಾವುದೇ ಕಾರ್ಖಾನೆಗಳು ಲಾಭದಾಯಕವಾಗಿ ಕಾರ್ಯನಿರ್ವಹಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಮೈಷುಗರ್ ಖಾಸಗಿಗೆ ವಹಿಸುವುದು ಬೇಡ ಎಂಬುದು ನನ್ನ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಶಾಸಕರ ನಿಯೋಗಕ್ಕೆ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವುದಿಲ್ಲ ಎಂಬ ಸ್ಪಷ್ಟ ಭರವಸೆಯನ್ನು ನೀಡಿದ್ದರು. ಆದರೆ ಈಗಿನ ಮುಖ್ಯ ಮಂತ್ರಿಗಳು ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿ ಪ್ರಾರಂಭಿಸಬೇಕು ಎಂಬ  ಒತ್ತಾಯದ ಬಗ್ಗೆ ಯಾವುದೇ ಸ್ಪಷ್ಟ ಭರವಸೆ ನೀಡುತ್ತಿಲ್ಲ. ಬೃಹತ್ ಕೈಗಾರಿಕಾ ಸಚಿವ ನಿರಾಣಿ ಅವರು ಮೈಷುಗರ್ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ಅಧಿವೇಶನದ ನಂತರ ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು, ರೈತ ಮುಖಂಡರ ಜೊತೆ ಸಭೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಭರವಸೆಯನ್ನು ಸದನದಲ್ಲಿ ನೀಡಿದ್ದಾರೆ. ಅಲ್ಲಿಯವರೆಗೆ ಕಾದು ನೋಡೋಣ. ಮೈಷುಗರ್ ಸಕ್ಕರೆ ಕಾರ್ಖಾನೆಯ ವಿಷಯವಾಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದ್ದು ಸಮಿತಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂಬ ಅಭಿಪ್ರಾಯವನ್ನು  ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ನಾಯಕಿ ಸುನಂದಾ ಜಯರಾಂ ಇನ್ನು ಕೆಲವು ದಿನಗಳು ಸರ್ಕಾರದ ನಿರ್ಧಾರಕ್ಕೆ ಕಾಯುತ್ತೇವೆ. ನಂತರ ನಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸುತ್ತೇವೆ. ಸದ್ಯಕ್ಕೆ ಧರಣಿ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ತಿಳಿಸಿದರು.

ಧರಣಿ ಸತ್ಯಾಗ್ರಹದಲ್ಲಿ   ರೈತ ಸಂಘದ  ಕೆ.ಬೋರಯ್ಯ, ಪಿಇಎಸ್ ಟ್ರಸ್ಟ್ ಅಧ್ಯಕ್ಷ ಕೆ.ಎಸ್ ವಿಜಯಾನಂದ, ದಲಿತ ಸಂಘರ್ಷ ಸಮಿತಿಯ ಎಂ.ಬಿ. ಶ್ರೀನಿವಾಸ್ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮೈಸೂರು ವಿವಿ ಸೆನೆಟ್ ಸದಸ್ಯ ಕೀಲಾರ ಜಯರಾಮ್, ಜಿ.ಎನ್.ಶಿವರುದ್ರಪ್ಪ, ಉದಯ್, ಹೆಚ್.ವಿ. ಜಯರಾಮ್, ತೂಬಿನಕೆರೆ ಲಿಂಗರಾಜು,ಶಂಕರಗೌಡ ಸೇರಿದಂತೆ ಹಲವು ರೈತ ಮುಖಂಡರು ಪ್ರತಿಭಟನೆ ಭಾಗವಹಿಸಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು