Categories: ಮಂಡ್ಯ

ವೈರಮುಡಿ ಬ್ರಹ್ಮೋತ್ಸವಕ್ಕೆ ಸಜ್ಜಾಗಲು ಅಧಿಕಾರಿಗಳಿಗೆ ಸೂಚನೆ

ಮಂಡ್ಯ: ಮಾರ್ಚ್ ನಲ್ಲಿ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವ ಆಚರಣೆಗೆ  ಸಕಲ ಸಿದ್ಧತೆಯೊಂದಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈರಮುಡಿ ಬ್ರಹ್ಮೋತ್ಸವ ಧಾರ್ಮಿಕ  ಕಾರ್ಯಕ್ರಮದ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಶ್ರೀ ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು, ಶಾಂತಿ ಸುವ್ಯವಸ್ಥೆ ಪಾಲನೆ, ಭದ್ರತಾ ವ್ಯವಸ್ಥೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳೊಂದಿಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಬರುವ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಮುಂಜಾಗೃತೆ ವಹಿಸುವಂತೆ ತಿಳಿಸಿದರಲ್ಲದೆ, ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಕೋವಿಡ್ ನಿಯಾಮವಳಿಗಳ ಪ್ರಕಾರ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಕುರಿತು ಚರ್ಚಿಸಿದರು.

ಶ್ರೀಕ್ಷೇತ್ರ ಸಂಪರ್ಕಿಸುವ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯಗಳ ಶೀಘ್ರ ಪ್ರಗತಿಯೊಂದಿಗೆ ಭಕ್ತಾಧಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಶ್ರೀ ವೈರಮುಡಿ ಬ್ರಹೋತ್ಸವ ಮುಗಿಯುವವರೆಗೆ ನಿರಂತರ ವಿದ್ಯುತ್ ಸರಬರಾಜು ಹಾಗೂ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಮಾಡುವುದು ಬಹಳ ಮುಖ್ಯ ಎಂದರಲ್ಲದೆ, ಕಾರ್ಯಕ್ರಮದ ಆಹ್ವಾನ ಪತ್ರ ಕರಪತ್ರ, ಬ್ಯಾನರ್ಗಳು, ಉತ್ಸವಕ್ಕೆ ಪಾಸ್ ಗಳು,ಅಗತ್ಯ ಇರುವ ಕಡೆಗಳಲ್ಲಿ ತಾತ್ಕಾಲಿಕ ಬ್ಯಾರಿಕೇಡ್ ನಿರ್ಮಾಣ ಮಾಡುವ ಕುರಿತು ಸಲಹೆಗಳನ್ನು ನೀಡಿದರು. ಬ್ರಹ್ಮೋತ್ಸವದಲ್ಲಿ ದೀಪಾಲಂಕಾರ, ಪುಷ್ಪಾಲಂಕಾರ, ತೆಪ್ಪ ನಿರ್ಮಾಣ ಹಾಗೂ ಸಾರ್ವಜನಿಕ ದಟ್ಟಣೆಯನ್ನು ನಿಯಂತ್ರಿಸುವ ಕುರಿತು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಎಸ್ಪಿ ಯತೀಶ್, ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಡಿ ಪ್ರಕಾಶ್, ಚೆಲುವನಾರಾಯಣಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಮಂಗಳಮ್ಮ, ಮೇಲುಕೋಟೆಯ ಪ್ರಧಾನ ಅರ್ಚಕರಾದ ಕರಗಂ ನಾರಾಯಣ ಅಯ್ಯಂಗಾರ್, ಆನಂದ್ ಆಳ್ವಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago