Categories: ಮಂಡ್ಯ

ಶೀಘ್ರಗತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಿ: ಸುಮಲತಾ ಅಂಬರೀಷ್

ಮಂಡ್ಯ: ಎಲ್ಲಾ ಇಲಾಖೆಗಳು ಕೇಂದ್ರವಲಯದ ಯೋಜನೆಗಳ ಅನುದಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ ಎಂದು ಸಂಸದೆ ಸುಮಲತಾ ಅಂಬರೀಷ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೊಳವೆ ಬಾವಿ, ಶಾಲಾ ಕೊಠಡಿಗಳು, ಕಾಂಪೌಂಡ್ ಗಳ ದುರಸ್ತಿ ಕಟ್ಟಡಗಳ ಮಾಹಿತಿ ಪಡೆದು ಸರಿಪಡಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿರುವ ಕೆರೆಗಳ ಕಾಮಗಾರಿಗಳು ಪೂರ್ಣಗೊಳಿಸಿ ಸೂಚಿಸಿದರಲ್ಲದೆ, ದುಡಿಯೋಣ ಬಾ ಯೋಜನೆಗೆ ಸಂಭಂದಿಸಿದಂತೆ ಪ್ರಸ್ತುತದ ಕಾರ್ಯದ ಮಾಹಿತಿಯನ್ನು ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿ ಒಟ್ಟು 101 ಶಾಲೆ ಮಂಜೂರಾಗಿ 62 ಶಾಲೆಗಳು ಪೂರ್ಣಗೊಂಡಿದೆ. 10 ಶಾಲೆಗಳು ಪ್ರಗತಿಯಲ್ಲಿರುವ  ಹಾಗೂ   ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದರಲ್ಲದೆ, ಕೋವಿಡ್- 19 ನಿಂದ ಮೃತಪಟ್ಟ ಕುಟುಂಬಗಳಿಗೆ  ಪರಿಹಾರ ಸರಿಯಾಗಿ ತಲುಪುತ್ತಿಲ್ಲ ಅಧಿಕಾರಿಗಳು ಇದನ್ನು ಗಮನಹರಿಸಿ ಆದಷ್ಟು ಬೇಗ ಅವರಿಗೆ ಪರಿಹಾರ ಒದಗಿಸಬೇಕು.ಮಳವಳ್ಳಿ ತಾಲ್ಲೂಕಿನಲ್ಲಿ ಚಿರತೆ ದಾಳಿ ಸಂಬಂಧ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ಸಾರ್ವಜನಿಕ ರಕ್ಷಣೆ ಬಹಳ ಮುಖ್ಯ ಕರ್ತವ್ಯವನ್ನು ಸರಿಯದ ಕ್ರಮದಲ್ಲಿ ನಿರ್ವಹಿಸುವಂತೆ ಸೂಚಿಸಿದರು.

ನೂತನ ರಸ್ತೆಗಳನ್ನು ನಿರ್ಮಾಣ ಮಾಡುವಾಗ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಚರ್ಚನಡೆಸಿ ರಸ್ತೆ ನಿರ್ಮಾಣಕ್ಕೆ ಯಾವುದೇ ಅಡ್ಡಿ ಯಾಗದಂತೆ ನೋಡಿಕೊಳ್ಳಿ. ಮಿಮ್ಸ್ ಆಸ್ಪತ್ರೆಯಲ್ಲಿನ ಕುಂದು ಕೊರತೆಗಳನ್ನು ಆದಷ್ಟು ಬೇಗ ಸರಿಪಡಿಸಿ ಜನ ಸಾಮಾನ್ಯರಿಗೆ ತೊಂದರೆಯಾಗಬಾರದು ಸರಿಯಾಗಿ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago