Categories: ಮಂಡ್ಯ

ಶೀಘ್ರದಲ್ಲೇ ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾ ವಿವಿ ಸ್ಥಾಪನೆ

ಮಂಡ್ಯ: ಪ್ರಧಾನಿ ಮೋದಿಯವರಿಂದ ಶೀಘ್ರದಲ್ಲೇ ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾ ವಿ.ವಿ ಬೆಂಗಳೂರಿನಲ್ಲಿ  ಆರಂಭವಾಗಲಿದೆ ಎಂದು ಕ್ರೀಡಾ  ಸಚಿವ ಡಾ. ಕೆ.ಸಿ ನಾರಾಯಣಗೌಡರು ಘೋಷಣೆ ಮಾಡಿದರು.

ಯುವಜನೋತ್ಸವನದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಯುವಜನೋತ್ಸವ ಕಾರ್ಯಕ್ರಮ ಇಲ್ಲಿ ನಡೆಯುತ್ತಿರುವುದು ನಮ್ಮ ಪುಣ್ಯ. ಇಂತಹ ಸಂದರ್ಭದಲ್ಲಿ ಯುವಕರಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

ನಾನು ಕ್ರೀಡಾ ಸಚಿವನಾಗಿ ಒಂದೂವರೆ ವರ್ಷವಾಗಿದೆ. ಅಧಿಕಾರವ ವಹಿಸಿಕೊಂಡ ತಕ್ಷಣ ಕರೋನ ಭಯದ ವಾತಾವರಣ ನಿರ್ಮಾಣ ಮಾಡಿದೆ. ಇದರಿಂದ ದೊಡ್ಡ ಕಾರ್ಯಕ್ರಮ ಮಾಡಲು ಸಾಧ್ಯವಾಗಿಲ್ಲ. ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹಿರಿಯ ಶ್ರೀಗಳಾದ ಬಾಲಗಂಗಾಧನಾಥ ಸ್ವಾಮೀಜಿಯವರು ದೊಡ್ಡ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ಇಂತಹ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸುತ್ತಿದ್ದೆ ಎಂದು ಹೇಳಿದರು.

ಮೂರನೇ ಅಲೆ ಪ್ರಾರಂಭ ಆಗಿರುವುದರಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು. ದೇಶದಲ್ಲಿ ಶೇ 40ರಷ್ಟು ಯುವಕರು ಇದ್ದಾರೆ. ಇವರನ್ನು ಬೆಳೆಸಿದರೆ ದೇಶ ಬೆಳೆಸಿದಂತೆ. ಬಾಲಗಂಗಾಧರನಾಥ ಸ್ವಾಮೀಜಿಯವರು ಪುಟ್ಟ ಮಕ್ಕಳನ್ನು ದತ್ತು ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.

ಹೀಗಾಗಿ ಚುಂಚನಗಿರಿಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಕ್ರೀಡಾ ಇಲಾಖೆಯಿಂದ ಕ್ರೀಡಾಸಕ್ತ ಮಕ್ಕಳನ್ನು ದತ್ತು ಪಡೆದುಕೊಂಡಿದ್ದೇವೆ. 2024ರ ವೇಳೆಗೆ 75 ಮಕ್ಕಳನ್ನು ಒಲಂಪಿಕ್ಸ್ ಗೆ ಕಳುಹಿಸುವ ಗುರಿಯನ್ನು ಹೊಂದಿದ್ದೇವೆ. ರಾಜ್ಯದಲ್ಲಿ ಕ್ರೀಡೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಾಗುವುದು ಎಂದು ಘೋಷಣೆ ಮಾಡಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಸುನಿಲ್ ಕುಮಾರ್, ಶಾಸಕ ಸುರೇಶ್ ಗೌಡ, ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಅಶ್ವಥಿ, ಎಸ್ ಪಿ ಎನ್ ಯತೀಶ್ ಇತರರಿದ್ದರು.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago