Categories: ಮಂಡ್ಯ

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳಿಗೆ ಅಧಿಕೃತ ಆಹ್ವಾನ

ಮಂಡ್ಯ : ಸೆ.9ರಿಂದ ಆರಂಭವಾಗುವ ಶ್ರೀರಂಗಪಟ್ಟಣ ದಸರಾವನ್ನು ಉದ್ಘಾಟಿಸುವಂತೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಬುಧವಾರ ಅಧೀಕೃತವಾಗಿ ಆಹ್ವಾನ ನೀಡಿದರು.

ಇಂದು ನಾಗಮಂಗಲದ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಚಿವರು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಲ ತಾಂಬೂಲ ನೀಡಿ ಗೌರವಿಸಿದರು. ಆನೆಯ ಕಲಾಕೃತಿಯ ಸ್ಮರಣಿಕೆ ನೀಡಿ ದಸರಾ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನಿಸಿದರು.
ಸ್ವಾಮೀಜಿಯವರಿಗೆ ದಸರಾ ಆಹ್ವಾನ ಪತ್ರಿಕೆ ನೀಡಿ, ಶ್ರೀಗಳಿಂದ ಶ್ರೀರಂಗಪಟ್ಟಣ ದಸರಾ ಪೋಸ್ಟರ್‌ನ್ನು ಬಿಡುಗಡೆಗೊಳಿಸಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ಶ್ರೀಗಳು, ನಾಡಿನ ಸಂಸ್ಕೃತಿಯ ಸಂಕೇತವಾಗಿರುವಂತಹ ದಸರಾವು ನಮ್ಮ ಶ್ರೀರಂಗಪಟ್ಟಣದಲ್ಲಿ ನಡೆಯುತ್ತದೆ. ಮೈಸೂರು ದಸರಾದ ರೀತಿಯಲ್ಲಿ ಮುಂಚೆ ಮೂಲವಾಗಿ ಪ್ರಾರಂಭವಾಗಿದ್ದು ನಮ್ಮ ಶ್ರೀರಂಗಪಟ್ಟಣದಲ್ಲಿ. ಇದೇ 9 ರಂದು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ನಮ್ಮ ಹಿರಿಯರು ಅತ್ಯುತ್ತಮವಾದ ಸಂಸ್ಕೃತಿಯನ್ನು ನಮ್ಮ ನಾಡಿಗೆ ಬಿಟ್ಟು ಹೋಗಿದ್ದಾರೆ, ಆ ಸಂಸ್ಕೃತಿಯನ್ನು ಮುಂದಿನ ಪರಂಪರೆಗೆ ಬಡಿಸಿ-ಉಣಿಸಿ, ಆಚರಿಸಿಕೊಂಡು- ಉಳಿಸಿಕೊಂಡು ಹೋಗುವಂತದ್ದು ನಮ್ಮ ಪರಂಪರಾಗತ ಸಂಸ್ಕೃತಿ ಎಂದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಾಡಿನ ಭಕ್ತಾದಿಗಳು, ಸಮಸ್ತ ಸಾರ್ವಜನಿಕರು ಆಗಮಿಸಿ ಸರ್ಕಾರ ಮತ್ತು ಜಿಲ್ಲಾಡಳಿತ ಹಮ್ಮಿಕೊಂಡಿರುವ ಕ್ರೀಡೆ ಮತ್ತು ಇತರೆ ಮನೋರಂಜನ ಕಾರ್ಯಕ್ರಮಗಳನ್ನು ನೋಡಿ ಆನಂದಿಸಿ ಎಂದು ಸಲಹೆ ನೀಡಿದರು.

ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, ಮೈಸೂರು ದಸರಾದ ಮೂಲ ನೆಲೆ ಶ್ರೀರಂಗಪಟ್ಟಣ, ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೋನಾದಿಂದ ಶ್ರೀರಂಗಪಟ್ಟಣ ದಸರಾವನ್ನು ಸರಿಯಾಗಿ ಆಚರಿಸಲು ಆಗಿರಲಿಲ್ಲ, ಆದರೆ ಈ ಬಾರಿ ಅರ್ಥಪೂರ್ಣವಾಗಿ ಮತ್ತು ಸಾಂಪ್ರದಾಯಿಕವಾಗಿ ದಸರಾವನ್ನು ಆಚರಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತಾವುಗಳು ಆಗಮಿಸಿ ಈ ಬಾರಿಯ ದಸರಾವನ್ನು ಉದ್ಘಾಟಿಸಿ, ಜಂಬೂಸವಾರಿಗೆ ಚಾಲನೆ ನೀಡಿ ಎಂದು ಶ್ರೀಗಳನ್ನು ಅಧಿಕೃತವಾಗಿ ಆಹ್ವಾನಿಸಿದರು.

Sneha Gowda

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

20 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

35 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

50 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

54 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago