ಮಂಡ್ಯ

ಶ್ರೀರಂಗಪಟ್ಟಣ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಕಾರೇಕುರ ಗ್ರಾಮದ ಬಳಿ ನಡೆದಿದೆ.

ಕಾರೇಕುರ ಗ್ರಾಮದ ಸಾಗರ್(26) ಮೃತ ಯುವಕ ಎನ್ನಲಾಗಿದೆ. ಕಳೆದ ದಿನಗಳ ಹಿಂದೆ ನಡೆದ ಕೆಆರ್ ಎಸ್ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿರುವುದು ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ.  ಗ್ರಾಮದ ಸಮೀಪದ ಜಮೀನಿನ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಯುವಕನ ರಕ್ತಸಿಕ್ತ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಹತ್ಯೆಗೈದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸ್ತಿದ್ದು, ಸ್ಥಳದಲ್ಲಿ ಸಾಕ್ಷಿಗಳ ಸಂಗ್ರಹಕ್ಕೆ ಮುಂದಾಗಿದ್ದು ಸ್ಥಳೀಯರಿಂದ ಈ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago