Categories: ಮಂಡ್ಯ

ಸುಪ್ರೀಂ ನ್ಯಾಯಾಧೀಶೆ ನಾಗರತ್ನ ಕನ್ನಡತಿ ಎನ್ನುವುದೇ ವಿಶೇಷ!

ಪಾಂಡವಪುರ : ಮೊಟ್ಟ ಮೊದಲ ಬಾರಿಗೆ ಭಾರತ ದೇಶದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಕಗೊಂಡಿರುವ ಬಿ.ವಿ.ನಾಗರತ್ನ ಅವರು ಕನ್ನಡತಿ ಅದರಲ್ಲೂ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಇಂಗಲಗುಪ್ಪೆಯವರು ಎನ್ನುವುದೇ ವಿಶೇಷವಾಗಿದೆ.

ಮಹಿಳೆಯೊಬ್ಬರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುತ್ತಿದ್ದು, ಸೇವಾ ಹಿರಿತನದ ಆಧಾರದ ಮೇರೆಗೆ ಸೆಪ್ಟೆಂಬರ್ 2027ಕ್ಕೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿಯೂ ನೇಮಕಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ 59 ವರ್ಷದ ನ್ಯಾ.ಬಿ.ಎಸ್.ನಾಗರತ್ನ ಅವರು ದಿ. ನ್ಯಾ. ಇ.ಎಸ್.ವೆಂಕಟರಾಮಯ್ಯರವರ ಪುತ್ರಿಯಾಗಿದ್ದಾರೆ. ನ್ಯಾ.ನಾಗರತ್ನ ಅವರ ತಂದೆ ದಿ.ಇ.ಎಸ್.ವೆಂಕಟರಾಮಯ್ಯ ಅವರು ದೇಶದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸ್ಥಾನವನ್ನು ಅಲಂಕರಿಸಿದ್ದರು. ಇದೀಗ ಅವರ ಪುತ್ರಿ ಕೂಡ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಹಾಗೂ ಮುಖ್ಯ ನ್ಯಾಯಮೂರ್ತಿಯಾಗಿಯೂ ನೇಮಕಗೊಳ್ಳುತ್ತಿರುವುದು ಪಾಂಡವಪುರ ತಾಲೂಕಿನ ಹೆಗ್ಗಳಿಕೆ. ಅದರಲ್ಲೂ ಕರ್ನಾಟಕದ ಗ್ರಾಮೀಣ ಪ್ರದೇಶದಿಂದ ಬಂದ ಇಬ್ಬರು ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿ ಸ್ಥಾನ ಅಲಂಕರಿಸುತ್ತಿರುವುದು ಗಮನಾರ್ಹವಾಗಿದೆ. ನ್ಯಾ.ನಾಗರತ್ನರ ಸಹೋದರ ನ್ಯಾ.ಇ.ಎಸ್.ಇಂದ್ರೇಶ್ ಕೂಡ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

30 ಅಕ್ಟೋಬರ್ 1962ರಲ್ಲಿ ಜನಿಸಿದ ನ್ಯಾ.ನಾಗರತ್ನ ಅವರು ಇ.ಎಸ್.ವೆಂಕಟರಾಮಯ್ಯ ಅವರ ಏಕೈಕ ಪುತ್ರಿ. ಬೆಂಗಳೂರಿನ ಸೋಫಿಯಾ ಶಾಲೆಯಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣ ಪೂರೈಸಿ, ಪಿಯುಸಿ, ಪದವಿ, ಕಾನೂನು ಪದವಿಯನ್ನು ದೆಹಲಿಯಲ್ಲಿ ಪೂರೈಸಿದರು. 1987ರಲ್ಲಿ ಕರ್ನಾಟಕದ ಬಾರ್ ಕೌನ್ಸಿಲ್‌ಗೆ ಸೇರಿದರು. 2008ರಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಸಾಂವಿಧಾನಿಕ ಮತ್ತು ವಾಣಿಜ್ಯ ಕಾನೂನು ಅಧ್ಯಯನ ಮಾಡಿದರು. ಅವರನ್ನು 17 ಫೆಬ್ರವರಿ 2010ರಂದು ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ನ್ಯಾ.ನಾಗರತ್ನ ಅವರ ತಂದೆ ಇ.ಎಸ್.ವೆಂಕಟರಾಮಯ್ಯ ದೇಶದ 19ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

Raksha Deshpande

Recent Posts

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 min ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

22 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

46 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

60 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago