ಮಂಡ್ಯ

ಭಾರತೀನಗರ: ಮಹಿಳಾ ಕೂಲಿಕಾರ್ಮಿಕರ ಸಮಸ್ಯೆ ಆಲಿಸಿದ ಶಾಸಕ ತಮ್ಮಣ್ಣ

ಭಾರತೀನಗರ: ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ದಿನಗೂಲಿಯನ್ನು ಹೆಚ್ಚಿಸುವಂತೆ ಸದನದಲ್ಲಿ ಮಾತನಾಡುತ್ತೇನೆಂದು ಶಾಸಕ ಡಿ.ಸಿ.ತಮ್ಮಣ್ಣ ಭರವಸೆ ನೀಡಿದರು.

ಬಿದರಹೊಸಹಳ್ಳಿ ಗ್ರಾಮದ ಬಳಿ ಮಹಿಳಾ ಕೂಲಿಕಾರ್ಮಿಕರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದ ಸ್ಥಳಕ್ಕೆ ಭೇಟಿನೀಡಿ ಸಮಸ್ಯೆಗಳ ಬಗ್ಗೆ ಆಲಿಸಿ ಮಾತನಾಡಿದರು.

ಈ ವೇಳೆ ಮಹಿಳೆಯರು ಮಾತನಾಡಿ ಸರ್ಕಾರ ನೀಡುತ್ತಿರುವ 309 ರೂ ದಿನಗೂಲಿ ನಮ್ಮ ಜೀವನಾಂಶಕ್ಕೆ ಸಾಕಾಗುತ್ತಿಲ್ಲ. ಸಲಕರಣೆ ವೆಚ್ಚವೆಂದು 10 ರೂ.ಗಳನ್ನು ಕಡಿತಗೊಳಿಸಿದ್ದಾರೆ. ಕನಿಷ್ಠ ದಿನಗೂಲಿ 600 ರೂ ಕೊಡಬೇಕು. ಆನ್‌ಲೈನ್ ಹಾಜರಾತಿ ರದ್ದುಪಡಿಸಬೇಕೆಂದು ಕೋರಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ತಮ್ಮಣ್ಣ ಅವರು ಈ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಸೆಳೆದು ದಿನಗೂಲಿ ಹೆಚ್ಚಿಸುವಂತೆ ಸದನದಲ್ಲಿ ಮಾತನಾಡುತ್ತೇನೆ. ಜೊತೆಗೆ 60 ವರ್ಷ ತುಂಬಿದವರಿಗೆ, ಅಂಗವಿಕಲರಿಗೆ, ಗರ್ಭೀಣಿಯರಿಗೆ, ಬಾಣಂತಿಯರಿಗೆ ಅನುಗುಣವಾಗುವಂತಹ ಕೆಲಸಗಳನ್ನು ಮನೆಯಲ್ಲೇ ನೀಡುವಂತೆ ಚರ್ಚಿಸುತ್ತೇನೆ. ಕೇರಳ ಸರ್ಕಾರ ಕೂಲಿಕಾರರಿಗೆ ಪ್ರೋತ್ಸಾಹ ಧನ ನೀಡುತ್ತಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯಸರ್ಕಾರವು ಪ್ರೋತ್ಸಾಹ ಧನ ನೀಡುವಂತೆ ಮಾತನಾಡುವುದಾಗಿ ಭರವಸೆ ನೀಡಿದರು.

ಆ ನಂತರ ಶೆಟ್ಟಹಳ್ಳಿ ಗ್ರಾಮದ ಶ್ರೀಬೊಮ್ಮಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಅವಧಿಯಲ್ಲಿ ರೈತರ ಸಾಲಮನ್ನ ಮಾಡಿ ಜನಪರಯೋಗಿ ಕೆಲಸ ನಿರ್ವಹಿಸಿದ್ದಾರೆ. ಹಾಗಾಗಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಪಂಚರತ್ನ ಯೋಜನೆಯ ಉದ್ಯೋಗ, ಶಿಕ್ಷಣ, ಮಹಿಳೆಯರ ಮತ್ತು ಯುವಕರ ಸಬಲೀಕರಣ, ರೈತರಿಗೆ ಚೈತನ್ಯ ಶಕ್ತಿ, ವಸತಿ ಹೀನರಿಗೆ ವಸತಿ ಸೌಲಭ್ಯ ಕಲ್ಪಿಸುವ 5 ಅಂಶಗಳನ್ನು ಒಳಗೊಂಡಂತೆ ಯಾತ್ರೆ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೂ ತೆರಳಿ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಜೊತೆಗೆ ರಾಜ್ಯ ಪ್ರವಾಸವನ್ನು ಕೈಗೊಂಡಿರುವುದಾಗಿ ಹೇಳಿದರು.

Gayathri SG

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

15 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago